ನಿಧಾನಗತಿಯ ಬೌಲಿಂಗ್; ವಾರ್ನರ್‌ಗೆ ₹12 ಲಕ್ಷ ದಂಡ ಬೆಂಗಳೂರು: ಐಪಿಎಲ್ 2023 ಟೂರ್ನಿಯಲ್ಲಿ ನಿಧಾನಗತಿಯ ಬೌಲಿಂಗ್ ನಡೆಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಮೇಲೆ ₹12 ಲಕ್ಷ ದಂಡ ಹೇರಲಾಗಿದೆ. ಹೈದರಾಬಾದ್‌ನಲ್ಲಿ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಏಳು ರನ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಡೆಲ್ಲಿ ಒಡ್ಡಿದ 145 ರನ್ ಗುರಿ ಬೆನ್ನಟ್ಟಿದ ಹೈದರಾಬಾದ್ ಆರು ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆದರೆ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ನಿಧಾನಗತಿಯ ಬೌಲಿಂಗ್ ನಡೆಸಿದ್ದಕ್ಕಾಗಿ ಡೆಲ್ಲಿ ನಾಯಕನಿಗೆ ದಂಡ ವಿಧಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.