ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್: ಭಾರತ ತಂಡ ಪ್ರಕಟಿಸಿದ ಬಿಸಿಸಿಐ, ರಹಾನೆ ಪುನರಾಗಮನ ನವದೆಹಲಿ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಫೈನಲ್‌ ಪಂದ್ಯಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಟಗಾರರ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಡಬ್ಲ್ಯುಟಿಸಿ ಫೈನಲ್‌ ಓವಲ್‌ ಕ್ರೀಡಾಂಗಣದಲ್ಲಿ ಜೂನ್‌ 7 ರಿಂದ 11ರವರೆಗೆ ಭಾರತ – ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಭಾರತ ಕ್ರಿಕೆಟ್‌ ತಂಡದ ಪ್ರಮುಖ ಆಟಗಾರರು ಐಪಿಎಲ್‌ ಟೂರ್ನಿಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದರೆ, ತಂಡದ ಕೋಚಿಂಗ್‌ ಸಿಬ್ಬಂದಿ ಮುಂಬರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನ (ಡಬ್ಲ್ಯುಟಿಸಿ) ಫೈನಲ್‌ ಪಂದ್ಯದತ್ತ ಗಮನ ಕೇಂದ್ರೀಕರಿಸಿದೆ. ಡಬ್ಲ್ಯುಟಿಸಿ ಫೈನಲ್‌ಗೆ ಭಾರತ ತಂಡವನ್ನು ಸಜ್ಜುಗೊಳಿಸುವ ಸಂಬಂಧ ಚರ್ಚಿಸಲು ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ನೇತೃತ್ವದಲ್ಲಿ ತಂಡದ ಕೋಚಿಂಗ್‌ ಸಿಬ್ಬಂದಿ ಬೆಂಗಳೂರಿನ ಎನ್‌ಸಿಎನಲ್ಲಿ ಸಭೆ ನಡೆಸಲಾಗಿತ್ತು. ‘ದ್ರಾವಿಡ್‌, ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಮತ್ತು ಕೋಚಿಂಗ್‌ನ ಇತರ ಸಿಬ್ಬಂದಿ ಸೇರಲಿದ್ದಾರೆ. ತಂಡಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಎನ್‌ಸಿಎ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್‌ ಅವರೊಂದಿಗೆ ಚರ್ಚೆ ನಡೆಯಲಿದೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 2023 , 2023 ( : ) ../fSqvymgNS4 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.