ವಾರಾಣಸಿಯಲ್ಲಿ ಶೀಘ್ರವೇ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ವಾರಾಣಸಿ: ಶೀಘ್ರದಲ್ಲೇ ವಾರಾಣಸಿಯಲ್ಲಿ ಉತ್ತರ ಪ್ರದೇಶದ ಮೂರನೇ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ತಲೆ ಎತ್ತಲಿದೆ. ಉತ್ತರ ಪ್ರದೇಶದ ಲಖನೌ ಹಾಗೂ ಕಾನ್ಪುರ್‌ದಲ್ಲಿ ಈಗಾಗಲೇ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗಿವೆ. ವಾರಾಣಸಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಕ್ರೀಡಾಂಗಣ ಇದೇ ಮೇ ಅಥವಾ ಜೂನ್‌ನಲ್ಲಿ ಆರಂಭವಾಗುವ ನಿರೀಕ್ಷೆ ಇದೆ. ಉತ್ತರ ಪ್ರದೇಶ ಸರ್ಕಾರದಿಂದ ಬಿಸಿಸಿಐ ಹಾಗೂ ಉತ್ತರ ಪ್ರದೇಶ ಕ್ರಿಕೆಟ್ ಅಸೋಶಿಯೇಷನ್ ಜಾಗವನ್ನು ತಮ್ಮ ವಶಕ್ಕೆ ಪಡೆಯಲಿವೆ. ಇದಕ್ಕಾಗಿ ವಾರಾಣಸಿಯ ರಾಜಾತಲಾಬ್‌ನಲ್ಲಿ 31 ಎಕರೆ ಜಾಗವನ್ನು ಗುರುತಿಸಲಾಗಿದೆ. ನೂತನ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಅವರು ಮೇ ಅಥವಾ ಜೂನ್‌ನಲ್ಲಿ ಗುದ್ದಲಿ ಪೂಜೆ ನೆರವೇರಿಸಲಿದ್ದು, 2024ರ ಅಂತ್ಯಕ್ಕೆ ಕ್ರೀಡಾಂಗಣ ಪೂರ್ಣವಾಗಿ ನಿರ್ಮಾಣಗೊಳ್ಳುವ ನಿರೀಕ್ಷೆ ಇದೆ ಎಂದು ಉತ್ತರ ಪ್ರದೇಶ ಕ್ರಿಕೆಟ್ ಅಸೋಶಿಯೇಷನ್ ನಿರ್ದೇಶಕ ಯದುವೀರ್ ಸಿಂಗ್ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.