2023 | ಕೊಹ್ಲಿ – ಡುಪ್ಲೆಸಿ ಫಿಫ್ಟಿ, ಪಂಜಾಬ್ ಗೆಲುವಿಗೆ 175 ರನ್ ಟಾರ್ಗೆಟ್‌ ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ. ಆರ್‌ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್‌ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು. ಪಂಜಾಬ್ ಪರ ಹರ್‌ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು. ! @ & @faf1307 @ 174/4 👌🏻👌🏻 @? ' 😎 ▶️ ://./CQekZNsh7b# | # ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.