2023 | ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಿವೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದಿರುವ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದಿದ್ದ ಪಂದ್ಯದಲ್ಲಿ ಫಫ್‌ ಡುಪ್ಲೆಸಿ ಬಳಗ ಎಂಟು ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಎದುರು ಸೋತಿತ್ತು. ಗೆಲುವಿಗೆ 227 ರನ್‌ಗಳ ಬೃಹತ್‌ ಗುರಿ ಬೆನ್ನಟ್ಟಿದ ಆರ್‌ಸಿಬಿ, 8 ವಿಕೆಟ್‌ಗಳಿಗೆ 218 ರನ್‌ ಗಳಿಸಲಷ್ಟೇ ಶಕ್ತವಾಗಿತ್ತು. ಈ ಪಂದ್ಯದಲ್ಲೂ ಬೆಂಗಳೂರಿನ ತಂಡದ ನಿರೀಕ್ಷೆಯ ಭಾರ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಮೇಲೆ ಇದೆ. ವಿರಾಟ್‌ ಕೊಹ್ಲಿ, ಫಫ್‌ ಡುಪ್ಲೆಸಿ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್ ಅವರು ಅಬ್ಬರಿಸಿದರೆ ಮಾತ್ರ ಗೆಲುವು ಸಾಧ್ಯ ಎಂಬಂಥ ಪರಿಸ್ಥಿತಿ ಇದೆ. ಚೆನ್ನೈ ಎದುರಿನ ಪಂದ್ಯದಲ್ಲಿ ಕೊಹ್ಲಿ (6) ಮತ್ತು ಮಹಿಪಾಲ್‌ ಲೊಮ್ರೊರ್‌ (0) ವಿಫಲರಾಗಿದ್ದರು. ಇದರಿಂದ ಇನಿಂಗ್ಸ್‌ಗೆ ಬಲ ತುಂಬುವ ಒತ್ತಡ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್‌ ಮೇಲೆ ಬಿದ್ದಿತ್ತು. ಅವರಿಬ್ಬರು ಅಬ್ಬರದ ಆಟವಾಡಿ ತಂಡವನ್ನು ಗೆಲುವಿನ ಸನಿಹ ತಂದು ನಿಲ್ಲಿಸಿದ್ದರು. ಬಳಿಕದ ಬ್ಯಾಟರ್‌ಗಳು ಒತ್ತಡಕ್ಕೆ ಒಳಗಾದ್ದರಿಂದ ತಂಡಕ್ಕೆ ಜಯ ದಕ್ಕಿರಲಿಲ್ಲ. ದಿನೇಶ್‌ ಕಾರ್ತಿಕ್, ಶಹಬಾಜ್‌ ಅಹ್ಮದ್‌ ಮತ್ತು ಸುಯಶ್‌ ಪ್ರಭುದೇಸಾಯಿ ಅವರಿಂದ ಜವಾಬ್ದಾರಿಯುತ ಆಟ ಬರಬೇಕಿದೆ. ಪಂಜಾಬ್‌ ಕಿಂಗ್ಸ್‌ಗೆ ಹೋಲಿಸಿದರೆ ಆರ್‌ಸಿಬಿಯ ಬೌಲಿಂಗ್‌ ವಿಭಾಗ ಸ್ವಲ್ಪ ‘ದುರ್ಬಲ’ ಎನಿಸಿದೆ. ಆದರೂ ಮೊಹಮ್ಮದ್‌ ಸಿರಾಜ್‌, ಹರ್ಷಲ್‌ ಪಟೇಲ್‌ ಮತ್ತು ವೇಯ್ನ್‌ ಪಾರ್ನೆಲ್‌ ಅವರು ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ. ಅದರಲ್ಲೂ ಸಿರಾಜ್‌ ಎಲ್ಲ ಪಂದ್ಯಗಳಲ್ಲೂ ಪರಿಣಾಮಕಾರಿ ಎನಿಸಿದ್ದಾರೆ. ಐದು ಪಂದ್ಯಗಳನ್ನು ಆಡಿರುವ ಆರ್‌ಸಿಬಿ ನಾಲ್ಕು ಪಾಯಿಂಟ್ಸ್‌ಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ಸ್‌ ಪಟ್ಟಿಯಲ್ಲಿ ಮೇಲಕ್ಕೇರಬೇಕಾದರೆ 2–3 ಪಂದ್ಯಗಳಲ್ಲಿ ಸತತ ಗೆಲುವು ಅನಿವಾರ್ಯ ಎನಿಸಿದೆ. ಪಂಜಾಬ್‌ ವಿರುದ್ಧದ ಪಂದ್ಯದೊಂದಿಗೆ ಗೆಲುವಿನ ಹಾದಿಗೆ ಮರಳುವ ವಿಶ್ವಾಸವನ್ನು ತಂಡ ಹೊಂದಿದೆ. ಶಿಖರ್‌ ಅಲಭ್ಯ: ಪಂಜಾಬ್ ಕಿಂಗ್ಸ್‌ ತಂಡ ನಾಯಕ ಶಿಖರ್‌ ಧವನ್‌ ಅವರು ಭುಜದ ನೋವಿನಿಂದ ಬಳಲುತ್ತಿದ್ದು, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ. ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧದ ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ಧವನ್ ಅನುಪಸ್ಥಿತಿಯಲ್ಲಿ ಸ್ಯಾಮ್ ಕರನ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಓದಿ... 2023 | ನಿಧಾನಗತಿ ಬೌಲಿಂಗ್: ಲಖನೌ ತಂಡದ ನಾಯಕ ರಾಹುಲ್‌ಗೆ ₹12 ಲಕ್ಷ ದಂಡ ತಂಡಗಳು ಇಂತಿವೆ... ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವೇಯ್ನ್ ಪಾರ್ನೆಲ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಪಂಜಾಬ್ ಕಿಂಗ್ಸ್‌: ಅರ್ಥವ್ ಟೈಡೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್ 🚨 🚨@ @.@ & @ . ▶️ ://./CQekZNsh7b# | # ../ITFDTd7ObP # 👌👌 🤔 ▶️ ://./CQekZNsh7b# ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.