2023 | ಲಖನೌ ವಿರುದ್ಧ ಟಾಸ್‌ ಗೆದ್ದ ಗುಜರಾತ್, ಬ್ಯಾಟಿಂಗ್ ಆಯ್ಕೆ ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 30ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ನಗರದ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಲಖನೌ ವಿರುದ್ಧ ಟಾಸ್‌ ಗೆದ್ದಿರುವ ಗುಜರಾತ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಗುಜರಾತ್ ತಂಡವು ಐದು ಪಂದ್ಯಗಳನ್ನು ಆಡಿ ಮೂರರಲ್ಲಿ ಜಯಿಸಿ ಎರಡರಲ್ಲಿ ಸೋತಿದೆ. ಅದೇ ಲಖನೌ ತಂಡವು ಆರು ಪಂದ್ಯಗಳನ್ನು ಆಡಿ ನಾಲ್ಕರಲ್ಲಿ ಜಯಿಸಿದೆ. ಪಾಯಿಂಟ್ ಪಟ್ಟಿಯಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ತಂಡವು ಎರಡನೇ ಸ್ಥಾನದಲ್ಲಿದೆ. ಆಗ್ರಸ್ಥಾನಕ್ಕೇರುವ ಕನಸು ಕಾಣುತ್ತಿರುವ ಲಖನೌಗೆ ಜಯದ ಹಾದಿಗೆ ಮರಳಲು ಹಂಬಲಿಸಿರುವ ಟೈಟನ್ಸ್‌ ತಂಡವು ಕಠಿಣ ಪೈಪೋಟಿಯೊಡ್ಡುವ ನಿರೀಕ್ಷೆ ಇದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಆರಂಭದಲ್ಲಿ ಉತ್ತಮವಾಗಿ ಆಡಿತ್ತು. ನಂತರದ ಪಂದ್ಯಗಳಲ್ಲಿ ಹಿನ್ನಡೆ ಅನುಭವಿಸಿತು. ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅಮೋಘ ಲಯದಲ್ಲಿದ್ದಾರೆ. ಅಲ್ಲದೇ ಮಧ್ಯಮ ಕ್ರಮಾಂಕದ ಬ್ಯಾಟರ್ ಡೇವಿಡ್ ಮಿಲ್ಲರ್ ಕೂಡ ಉತ್ತಮವಾಗಿ ಆಡುತ್ತಿದ್ದಾರೆ. ಲಖನೌ ಆರಂಭಿಕ ಜೋಡಿ ಕೆ.ಎಲ್. ರಾಹುಲ್ ಹಾಗೂ ಕೈಲ್ ಮೇಯರ್ಸ್ ಉತ್ತಮ ಲಯದಲ್ಲಿದ್ದಾರೆ. ಅವರಲ್ಲದೇ ಆಯುಷ್ ಬಡೋಣಿ ಹಾಗೂ ನಿಕೊಲಸ್ ಪೂರನ್ ಅವರು ಅಬ್ಬರಿಸಿದರೆ ಲಖನೌ ತಂಡಕ್ಕೆ ದೊಡ್ಡ ಮೊತ್ತ ಗಳಿಸುವುರು ಆಥವಾ ಬೆನ್ನತ್ತಿ ಗೆಲ್ಲುವುದು ಸುಲಭವಾಗಲಿದೆ. ರಾಹುಲ್ ಬಳಗವು ಬೌಲಿಂಗ್‌ ನಲ್ಲಿಯೂ ಸ್ಟೊಯಿನಿಸ್, ಆವೇಶ್ ಖಾನ್, ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಅಮಿತ್ ಮಿಶ್ರಾ ಅವರ ಮೇಲೆ ಹೆಚ್ಚು ಭರವಸೆ ಇಟ್ಟುಕೊಂಡಿದೆ. ತಂಡಗಳು ಇಂತಿವೆ: ಲಖನೌ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್‌ ಸ್ಟೋಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬಡೋನಿ, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ಅವೇಶ್ ಖಾನ್, ರವಿ ಬಿಷ್ಣೋಯ್ ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ 🚨 🚨@gujarat_titans @. ▶️ ://./TtAH2CiXVI# | # ../20T7s855If ‼️ # ? ▶️ ://./TtAH2CiXVI# ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.