2023: ಚೆನ್ನೈ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಟಿ–20 ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಆಡಿರುವ 4 ಪಂದ್ಯಗಳ ಪೈಕಿ ಆರ್‌ಸಿಬಿ ಎರಡರಲ್ಲಿ ಗೆದ್ದು, ಎರಡರಲ್ಲಿ ಸೋತಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ 23 ರನ್‌ಗಳಿಂದ ಗೆಲುವು ಸಾಧಿಸಿರುವ ಆರ್‌ಸಿಬಿ ಆತ್ಮವಿಶ್ವಾಸದಲ್ಲಿದೆ. ಚೆನ್ನೈ ಸಹ 4 ಪಂದ್ಯಗಳ ಪೈಕಿ ಎರಡರಲ್ಲಿ ಸೋತು ಎರಡರಲ್ಲಿ ಗೆದ್ದಿದೆ. ಕಳೆದ ಪಂದ್ಯದಲ್ಲಿ ಮೊದಲ ಬಾರಿಗೆ ಅವಕಾಶ ಪಡೆದ ಕರ್ನಾಟಕ ಮೂಲದ ವೈಶಾಕ್ 3 ವಿಕೆಟ್ ಕಿತ್ತಿರುವುದು ತಂಡದ ಬಲವನ್ನು ಹೆಚ್ಚಿಸಿದೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡು ಪ್ಲೆಸಿಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿ, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಶಾಬಾಜ್ ಅಹಮ್ಮದ್, ಹರ್ಷಲ್ ಪಟೇಲ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯ್ ಕುಮಾರ್ ಚೆನ್ನೈ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಶಿವಂ ದುಬೆ, ಮೋಯಿನ್ ಅಲಿ, ರವಿಂದ್ರ ಜಡೇಜ, ಎಂ.ಎಸ್. ಧೋನಿ, ತುಷಾರ್ ದೇಶಪಾಂಡೆ, ಮಮಹೀಶ್ ತೀಕ್ಷಣ, ಅಂಬಾಟಿ ರಾಯುಡು, ಮತೀಶಾ ಪತಿರಾಣಾ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.