2nd : ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ –ಶ್ರೀಲಂಕಾ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಶ್ರೀಲಂಕಾ ವಿರುದ್ಧಟಾಸ್ ಗೆದ್ದಿರುವ ಭಾರತ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸದ್ಯ ಬ್ಯಾಟಿಂಗ್ ಆರಂಭಿಸಿರುವ ಭಾರತ 2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 10 ರನ್ ಗಳಿಸಿದೆ. 4 ರನ್‌ ಗಳಿಸಿ ಮಯಂಕ್ ಅಗರವಾಲ್ ಔಟ್ ಆಗಿದ್ದಾರೆ. ಕೋವಿಡ್ ಬಿಕ್ಕಟ್ಟಿನಿಂದಾಗಿ ಸತತ ಎರಡು ವರ್ಷಗಳಿಂದ ಮಂಕಾಗಿದ್ದ ಚಿನ್ನಸ್ವಾಮಿ ಅಂಗಣದಲ್ಲಿ ಈಗ ಹೊಸಕಾಂತಿ ಮೂಡಿದೆ. ಉದ್ಯಾನನಗರಿಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಸಲ ಪಿಂಕ್ ಬಾಲ್ ಟೆಸ್ಟ್ ಆಯೋಜನೆಗೊಂಡಿದೆ. ಮೊಹಾಲಿಯಲ್ಲಿ ನಡೆದಿದ್ದ ಸರಣಿಯ ಮೊದಲ ಪಂದ್ಯದಲ್ಲಿ ಈಗಾಗಲೇ ಗೆದ್ದಿರುವ ಭಾರತ ತಂಡವು ಬೆಂಗಳೂರಿನಲ್ಲಿಯೂ ಜಯಿಸುವ ನೆಚ್ಚಿನ ತಂಡವಾಗಿದೆ. ಎಲ್ಲ ವಿಧದಿಂದಲೂ ಶ್ರೀಲಂಕಾಗಿಂತ ಭಾರತವು ಬಲಾಢ್ಯ ತಂಡವಾಗಿದೆ. ಬೆಂಗಳೂರಿನ ರಾಹುಲ್ ದ್ರಾವಿಡ್ ಕೂಡ ಕೋಚ್ ಆದ ನಂತರ ಪ್ರಥಮ ಬಾರಿಗೆ ತವರಿನಂಗಳದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಈ ಕ್ರೀಡಾಂಗಣದಲ್ಲಿ ನಾಲ್ಕು ವರ್ಷಗಳ ನಂತರ ಟೆಸ್ಟ್ ಪಂದ್ಯ ನಡೆಯುತ್ತಿದೆ. ಅದರಿಂದಾಗಿಯೇ ಈ ವಾರಾಂತ್ಯದ ಪ್ರಮುಖ ಆಕರ್ಷಣೆಯಾಗಿ ಪ್ರೇಕ್ಷಕರನ್ನು ಮೈದಾನದತ್ತ ಸೆಳೆಯುತ್ತಿದೆ. ಓದಿ... ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಸಮಂತಾ: ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ ವೈರಲ್ 🚨 🚨 1⃣ # . # | @ ▶️ ://./t74OLq7xoO ' - 🔽 ../4ObSFoM7wU ಓದಿ...ಎಂಥ ಅದ್ಭುತ ಫೋಟೊ...: ಭಗವಂತ ಮಾನ್‌ರನ್ನು ಅಭಿನಂದಿಸಿದ ಹರ್ಭಜನ್‌ ಸಿಂಗ್ 🚨 🚨@ImRo45 & # . 👍# | @ ../hkG9CyP7Xr ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.