- | ಐದು ವಿಕೆಟ್‌ಗಳ ಗೆಲುವು ಸಾಧಿಸಿ ಸರಣಿ ಸಮಬಲ ಮಾಡಿಕೊಂಡ ವೆಸ್ಟ್ ಇಂಡೀಸ್ ಬೆಸೆಟೆರ್, ಸೇಂಟ್ ಕಿಟ್ಸ್: ಇಲ್ಲಿನ ವಾರ್ನರ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಐದು ಟಿ20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಐದು ವಿಕೆಟ್ ಗೆಲುವು ಸಾಧಿಸಿದೆ. ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿ ಗೆದ್ದ ನಂತರ ನಿಗದಿತ ಐದು ಟಿ20 ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯವನ್ನು ಜಯಿಸಿದ್ದ ಭಾರತ, 1–0 ಮುನ್ನಡೆ ಸಾಧಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ್ದರಿಂದ, 1–1 ಸರಣಿ ಸಮಬಲ ದಾಖಲಾಗಿದೆ. ಏಕದಿನ ಸರಣಿಯಲ್ಲಿ ಸತತ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ, ಟಿ20 ಪಂದ್ಯ ಗೆಲ್ಲುವ ಮೂಲಕ ಕೊನೆಗೂ ಗೆಲುವಿನ ನಗು ಬೀರಿದೆ. ಟೀಂ ಇಂಡಿಯಾ ನೀಡಿದ್ದ 139 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ವೆಸ್ಟ್ ಇಂಡೀಸ್ ತಂಡ, 19.2 ಓವರ್‌ನಲ್ಲಿ ಐದು ವಿಕೆಟ್ ಕಳೆದುಕೊಂಡು 141 ರನ್ ಗಳಿಸಿ ಗೆಲುವು ದಾಖಲಿಸಿತು. ವೆಸ್ಟ್ ಇಂಡೀಸ್ ಪರ ಬ್ರಾಂಡನ್ ಕಿಂಗ್ 64 ಮತ್ತು ಡೆವೊನ್ ಥಾಮಸ್ 31 ರನ್ ಗಳಿಸಿ, ತಂಡಕ್ಕೆ ಬಲ ನೀಡಿದರು. ಜಿಂಬಾಬ್ವೆ ಸರಣಿಗೆ ಆಯ್ಕೆಯಾಗದಿರುವುದಕ್ಕೆ ಸ್ಪಷ್ಟನೆ ನೀಡಿದ ಕೆ.ಎಲ್‌ ರಾಹುಲ್‌ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೂರನೇ ಪಂದ್ಯ ಇಂದು ನಡೆಯಲಿದೆ. ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ತಂಡ ಪ್ರಕಟ: ಶಿಖರ್‌ ಧವನ್‌ಗೆ ನಾಯಕತ್ವ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.