ರಿಚರ್ಡ್ಸ್‌ನ್ ಮಿಂಚು; ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ಆಸ್ಟ್ರೇಲಿಯಾ ಮುನ್ನಡೆ ಕ್ಯಾನ್‌ಬೆರಾ: ಕೇನ್ ರಿಚರ್ಡ್ಸನ್‌ ಅಮೋಘ ಬೌಲಿಂಗ್ ಬಲದಿಂದ ಆತಿಥೇಯ ಆಸ್ಟ್ರೇಲಿಯಾ ತಂಡವು ಮಂಗಳವಾರ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಜಯಿಸಿತು. ಆಸ್ಟ್ರೇಲಿಯಾವು ಐದು ಪಂದ್ಯಗಳ ಸರಣಿಯನ್ನು 3–0ಯಿಂದ ಕೈವಶ ಮಾಡಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡವು ಕೇನ್ (21ಕ್ಕೆ3) ಬೌಲಿಂಗ್‌ ಬಲದಿಂದ ಲಂಕಾ ತಂಡವನ್ನು 121 ರನ್‌ಗಳಿಗೆ ಕಟ್ಟಿಹಾಕಿತು. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ನಾಯಕ ಆ್ಯರನ್ ಫಿಂಚ್ ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ತಂಡವು ಇನಿಂಗ್ಸ್‌ನಲ್ಲಿ ಇನ್ನೂ 19 ಎಸೆತಗಳು ಬಾಕಿ ಇರುವಾಗಲೇ ಜಯಭೇರಿ ಬಾರಿಸಿತು. ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ: 20 ಓವರ್‌ಗಳಲ್ಲಿ 121 (ಚಾಂಡಿಮಲ್ 25, ದಸನ್ ಶನಾಕಾ ಔಟಾಗದೆ 39, ರಿಚರ್ಡ್ಸ್‌ನ್ 21ಕ್ಕೆ3), ಆಸ್ಟ್ರೇಲಿಯಾ: 16.5 ಓವರ್‌ಗಳಲ್ಲಿ 4ಕ್ಕೆ 124 (ಆ್ಯರನ್ ಫಿಂಚ್ 35, ಗ್ಲೆನ್ ಮ್ಯಾಕ್ಸ್‌ವೆಲ್ 39, ತೀಕ್ಷಣ 24ಕ್ಕೆ3) ಫಲಿತಾಂಶ: ಆಸ್ಟ್ರೇಲಿಯಾ ತಂಡಕ್ಕೆ 6 ವಿಕೆಟ್‌ಗಳ ಜಯ. 5 ಪಂದ್ಯಗಳ ಸರಣಿಯಲ್ಲಿ 3–0 ಮುನ್ನಡೆ, ಪಂದ್ಯಶ್ರೇಷ್ಠ: ಕೇನ್ ರಿಚರ್ಡ್ಸನ್‌. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.