T20 2022: ಭಾರತ, ಪಾಕ್‌ ಪಂದ್ಯದ ಟಿಕೆಟ್‌ಗಳು 5 ನಿಮಿಷಗಳಲ್ಲೇ ಬಿಕರಿ! ದುಬೈ: ಆಸ್ಟ್ರೇಲಿಯಾದಲ್ಲಿ ಇದೇ ವರ್ಷದ ಅಕ್ಟೋಬರ್‌ 16ರಿಂದ ನವೆಂಬರ್‌ 13ರವರೆಗೆ ನಡೆಯಲಿರುವ ಪುರುಷರ ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯ ಟಿಕೆಟ್‌ಗಳ ಮಾರಾಟ ಆರಂಭವಾಗಿದ್ದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌ಗಳುಕೇವಲ 5 ನಿಮಿಷಗಳಲ್ಲಿ ಮಾರಾಟವಾಗಿವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಂದ್ಯದ ಟಿಕೆಟ್‌ಗಳು ಕೇವಲ 5 ನಿಮಿಷಗಳಲ್ಲಿ ಮಾರಾಟವಾಗಿವೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಪ್ರಕಟಣೆಯಲ್ಲಿ ತಿಳಿಸಿದೆ. ಪುರುಷರ ಟಿ20 ಕ್ರಿಕೆಟ್‌ ವಿಶ್ವಕಪ್‌ ಅನ್ನು ಆಸ್ಟ್ರೇಲಿಯಾ ಮೊದಲ ಬಾರಿಗೆ ಆಯೋಜಿಸುತ್ತಿದೆ. ಅಡಿಲೇಡ್, ಬ್ರಿಸ್ಬೇನ್, ಗೀಲಾಂಗ್, ಹೋಬರ್ಟ್, ಮೆಲ್ಬರ್ನ್‌, ಪರ್ತ್ ಮತ್ತು ಸಿಡ್ನಿಯಲ್ಲಿ ಪಂದ್ಯಗಳು ನಡೆಯಲಿವೆ. ಟೂರ್ನಿಯ ಸೂಪರ್ 12 ಪಂದ್ಯಗಳಿಗೆ ₹ 375ರಿಂದ ಟಿಕೆಟ್‌ಗಳು ಆರಂಭವಾಗುತ್ತವೆ. ವಯಸ್ಕರ ಟಿಕೆಟ್‌ಗಳು ಆಯ್ದ ಪಂದ್ಯಗಳಿಗೆ ₹ 1500ರಿಂದ ಲಭ್ಯವಿವೆ ಎಂದುಐಸಿಸಿ ತಿಳಿಸಿದೆ. ಟೂರ್ನಿಯ ಎಲ್ಲ 45 ಪಂದ್ಯಗಳ ಟಿಕೆಟ್‌ಗಳು t20worldcup.comನಲ್ಲಿ ಲಭ್ಯ ಇವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.