: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ ಪರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಭಾರತ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋತಿತ್ತು. ಇದೀಗ ಮೂರು ಪಂದ್ಯಗಳ ಸರಣಿ ಗೆಲುವಿನ ಕನಸು ಜೀವಂತವಾಗುಳಿಯಬೇಕಾದರೆ ಇಂದು ನಡೆಯುವ ಎರಡನೇ ಪಂದ್ಯದಲ್ಲಿ ತಂಡವು ಜಯಿಸಲೇಬೇಕಾದ ಒತ್ತಡದಲ್ಲಿದೆ. ಇತ್ತ ಕನ್ನಡಿಗ ಕೆ.ಎಲ್. ರಾಹುಲ್ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ಸಂಪೂರ್ಣವಾಗಿ ಪಣಕ್ಕೊಡ್ಡಬೇಕಾದ ಅನಿವಾರ್ಯತೆ ಎದುರಾಗಿದೆ. ತಂಡಗಳು: ಭಾರತ: ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬೂಮ್ರಾ, ಯಜುವೇಂದ್ರ ಚಾಹಲ್ ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ರಸಿ ವ್ಯಾನ್ ಡರ್ ಡಸೆನ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಜೆನ್‌ಮನ್ ಮಲಾನ್, ಡೇವಿಡ್ ಮಿಲ್ಲರ್, ಏಡನ್ ಮರ್ಕರಮ್, ಆ್ಯಂಡಿಲ್ ಪಿಶುವಾಯೊ, ಮಾರ್ಕೊ ಜ್ಯಾನ್ಸೆನ್, ಕೇಶವ್ ಮಹಾರಾಜ, ತಬ್ರೇಜ್ ಶಮ್ಸಿ, ಲುಂಗಿ ಗಿಡಿ ಓದಿ... T20 2022: ಅ.23ರಂದು ಭಾರತ –ಪಾಕಿಸ್ತಾನದ ನಡುವೆ ಹೈವೋಲ್ಟೆಜ್ ಕದನ # 2nd . - ://./ # ../bvoiR0PIv2 #. ://./ # ../tjy23hzGWF ಓದಿ... ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ಗೆ ಕೋವಿಡ್‌ ಪಾಸಿಟಿವ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.