ಕೊರೊನಾ ಸೋಂಕು: ಸೌರವ್ ಗಂಗೂಲಿ ಆರೋಗ್ಯ ಸ್ಥಿರ ಕೋಲ್ಕತ್ತ: ಕೋವಿಡ್ ಚಿಕಿತ್ಸೆಗಾಗಿ ಇಲ್ಲಿಯ ವುಡ್‌ಲ್ಯಾಂಡ್ಸ್‌ ಆಸ್ಪತ್ರೆಗೆ ದಾಖಲಾಗಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ. ‘ಅವರು ಆಸ್ಪತ್ರೆಗೆ ದಾಖಲಾಗಿ ಎರಡು ದಿನವಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆಮ್ಲಜನಕ ಮಟ್ಟವು ಶೇ 99ರಷ್ಟು ಇದೆ. ರಾತ್ರಿ ಚೆನ್ನಾಗಿ ನಿದ್ದೆ ಮಾಡಿದ್ದಾರೆ. ಬುಧವಾರ ಬೆಳಿಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟವನ್ನೂ ಮಾಡಿದ್ದರೆ’ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ರೂಪಾಲಿ ಬಸು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಆರ್‌ಟಿಪಿಸಿಆರ್ ವರದಿಯಲ್ಲಿ ಗಂಗೂಲಿ ಅವರಿಗೆ ಕೋವಿಡ್ ಇರುವುದು ಖಚಿತವಾಗಿತ್ತು. ಅವರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಣತ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.