ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಿದ ಕೊಹ್ಲಿ ಬಳಗ ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಬಹುನಿರೀಕ್ಷಿತ ಸರಣಿಗಾಗಿ ಟೀಮ್ ಇಂಡಿಯಾ ಆಟಗಾರರು ಪ್ರಯಾಣ ಬೆಳೆಸಿದ್ದಾರೆ. ಭಾರತ ಟೆಸ್ಟ್ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದು, ಅಮೋಘ ಗೆಲುವಿನ ಓಟವನ್ನು ಮುಂದುವರಿಸುವ ನಿರೀಕ್ಷೆಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದ ಆರಂಭದಲ್ಲಿ ಭಾರತ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ. ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26ರಂದು ಆರಂಭವಾಗಲಿದೆ. ಟೆಸ್ಟ್ ಸರಣಿಯ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಹಾಗೂ ಟ್ವೆಂಟಿ-20 ತಂಡದ ನಾಯಕ ರೋಹಿತ್ ಶರ್ಮಾ, ಸ್ನಾಯು ಸೆಳೆತಕ್ಕೊಳಗಾಗಿದ್ದರಿಂದ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ✌🏻 ✈️🇿🇦# # ../fCzyLzIW0s ವೇಳಾಪಟ್ಟಿ ಇಂತಿದೆ: ಟೆಸ್ಟ್ ಸರಣಿ: ಮೊದಲ ಟೆಸ್ಟ್: ಡಿ.26, ಸೆಂಚುರಿಯನ್ ದ್ವಿತೀಯ ಟೆಸ್ಟ್: ಜ.3, ಜೋಹಾನ್ಸ್‌ಬರ್ಗ್ ತೃತೀಯ ಟೆಸ್ಟ್: ಜ.11, ಕೇಪ್ ಟೌನ್ ಏಕದಿನ ಸರಣಿ: ಮೊದಲ ಏಕದಿನ: ಜ.19, ಪಾರ್ಲ್ ದ್ವಿತೀಯ ಏಕದಿನ: ಜ.21, ಪಾರ್ಲ್ ಅಂತಿಮ ಏಕದಿನ: ಜ.23, ಕೇಪ್ ಟೌನ್. ಏತನ್ಮಧ್ಯೆ ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ವಿವಾದಗಳ ಕುರಿತು ಮಾತನಾಡಿರುವ ನಾಯಕ ವಿರಾಟ್ ಕೊಹ್ಲಿ, ತಮ್ಮ ಹಾಗೂ ರೋಹಿತ್ ಶರ್ಮಾ ನಡುವೆ ಯಾವುದೇ ಭಿನ್ನಭಿಪ್ರಾಯವಿಲ್ಲ. ಏಕದಿನ ಹಾಗೂ ಟ್ವೆಂಟಿ-20ನಲ್ಲಿ ಅವರ ನಾಯಕತ್ವಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.