: ಸತತ 19ನೇ ಗೆಲುವು; ದಾಖಲೆಯ ಹೊಸ್ತಿಲಲ್ಲಿ ಹಿಟ್‌ಮ್ಯಾನ್ ಬರ್ಮಿಂಗ್‌ಹ್ಯಾಮ್: ಹಿಟ್‌ಮ್ಯಾನ್ ಖ್ಯಾತಿಯ ಭಾರತ ಕ್ರಿಕೆಟ್ ತಂಡದ ಕಪ್ತಾನ ರೋಹಿತ್ ಶರ್ಮಾ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಪ್ತಾನರಾಗಿ ಸತತ 19ನೇ ಗೆಲುವು ದಾಖಲಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾದ ಮಾಜಿ ದಿಗ್ಗಜ ರಿಕಿ ಪಾಂಟಿಂಗ್ ಅವರ ದಾಖಲೆ ಸರಿಗಟ್ಟಲು ಇನ್ನೊಂದು ಗೆಲುವಿನ ಅಗತ್ಯವಿದೆ. ಇದನ್ನೂ ಓದಿ: 2nd T20I: ಇಂಗ್ಲೆಂಡ್‌ ವಿರುದ್ಧ ಸರಣಿ ಕೈವಶಪಡಿಸಿಕೊಂಡ ಟೀಮ್ ಇಂಡಿಯಾ ಇಂದು (ಭಾನುವಾರ) ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅಂತಿಮ ಟ್ವೆಂಟಿ-20 ಪಂದ್ಯದಲ್ಲೂ ಗೆಲುವು ದಾಖಲಿಸಿದರೆ ರೋಹಿತ್, ನಾಯಕರಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತ 20 ಜಯ ಗಳಿಸಿದ್ದ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಲಿದ್ದಾರೆ. ' 😮# ಶನಿವಾರ ಎಜ್‌ಬಾಸ್ಟನ್‌ನಲ್ಲಿ ನಡೆದ ದ್ವಿತೀಯ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ 49 ರನ್ ಅಂತರದ ಗೆಲುವು ದಾಖಲಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಇರುವಂತೆಯೇ 2-0ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಅಲ್ಲದೆ ಸರಣಿ ಕ್ಲೀನ್‌ಸ್ವೀಪ್ ಮಾಡುವತ್ತ ಗುರಿ ನೆಟ್ಟಿದೆ. ಕಪ್ತಾನರಾಗಿ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗೆಲುವಿನ ಓಟ ಮುಂದುವರಿಸಿರುವ ರೋಹಿತ್ ಶರ್ಮಾ, ಸತತ 14ನೇ ಗೆಲುವು ದಾಖಲಿಸಿದ್ದಾರೆ. ಅಂದ ಹಾಗೆ ರೋಹಿತ್ಗೆಲುವಿನ ಓಟ 2019ರಲ್ಲಿ ಬಾಂಗ್ಲಾದೇಶ ವಿರುದ್ಧದ ಸರಣಿಯೊಂದಿಗೆ ಆರಂಭವಾಗಿತ್ತು. ಏತನ್ಮಧ್ಯೆ ಇಂಗ್ಲೆಂಡ್ ವಿರುದ್ಧ ಭಾರತ ತಂಡವು ಸತತ ನಾಲ್ಕನೇ ಟ್ವೆಂಟಿ-20 ಸರಣಿ ಗೆಲುವು ದಾಖಲಿಸಿದೆ. ಹಾಗೆಯೇ ವಿರಾಟ್ ಕೊಹ್ಲಿ ಬಳಿಕ ಆಂಗ್ಲರ ನಾಡಿನಲ್ಲಿ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.