3rd T20| ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ ನಾಟಿಂಗ್‌ಹ್ಯಾಮ್‌: ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೆಸ್‌ ಗೆದ್ದಿರುವ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ನಾಟಿಂಗ್‌ಹ್ಯಾಮ್‌ನ ಟ್ರೆಂಟ್‌ ಬ್ರಿಡ್ಜ್‌ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ. ಮೂರು ಪಂದ್ಯಗಳ ಸರಣಿಯನ್ನು ಭಾರತ ಈಗಾಗಲೇ 2–0 ಅಂತರದಲ್ಲಿ ಗೆದ್ದುಕೊಂಡಿದೆ. ನಾಲ್ಕು ಬದಲಾವಣೆ:ಭಾರತ ಈ ಬಾರಿ ನಾಲ್ಕು ಬದಲಾವಣೆ ಮಾಡಿದೆ. ಯುಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಕೈಗಿಡಲಾಗಿದ್ದು, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಭಾರತ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್‌), ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌) ವಿರಾಟ್‌ ಕೊಹ್ಲಿ, ಸೂರ್ಯಕುಮಾರ್ ಯಾದವ್‌, ಶ್ರೇಯಸ್‌ ಅಯ್ಯರ್‌, ದಿನೇಶ್‌ ಕಾರ್ತಿಕ್‌, ರವೀಂದ್ರ ಜಡೇಜಾ, ಹಾರ್ದಿಕ್‌ ಪಟೇಲ್‌, ರವಿ ಬಿಶ್ನೋಯಿ, ಅವೆಶ್‌ ಖಾನ್‌, ಉಮ್ರಾನ್‌ ಮಲೀಕ್‌ 3RD T20I. : (), (), , , , , , , , , . ://./hMsXyHO74G # ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.