2nd T20I: ಹರ್ಷಲ್ ಪಟೇಲ್ ಪದಾರ್ಪಣೆ; ಭಾರತ ಫೀಲ್ಡಿಂಗ್ ರಾಂಚಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತದ ನಾಯಕ ರೋಹಿತ್ ಶರ್ಮಾ, ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಭಾರತದ ಪರ ಬಲಗೈ ವೇಗದ ಬೌಲರ್ ಹರ್ಷಲ್ ಪಟೇಲ್ ಪದಾರ್ಪಣೆ ಮಾಡುತ್ತಿದ್ದಾರೆ. ಐಪಿಎಲ್‌ 2021ರಲ್ಲಿ ಆರ್‌ಸಿಬಿ ಪರ ಗಮನಾರ್ಹ ಪ್ರದರ್ಶನ ನೀಡಿರುವ ಹರ್ಷಲ್, ಅತಿ ಹೆಚ್ಚು ವಿಕೆಟ್ ಕಬಳಿಸಿದ್ದರು. 🎥 🎥 @HarshalPatel23 # . 👏 👏@ # ../n9IIPXFJQ7 ತಂಡಗಳು ಇಂತಿವೆ: ಭಾರತ: ಕೆ.ಎಲ್. ರಾಹುಲ್, ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್ ಮತ್ತು ಹರ್ಷಲ್ ಪಟೇಲ್. ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಜೇಮ್ಸ್ ನಿಶಾಮ್, ಮಿಚೆಲ್ ಸ್ಯಾಂಟ್ನರ್, ಈಶ್ ಸೋಧಿ, ಟಿಮ್ ಸೌಥಿ (ನಾಯಕ), ಆ್ಯಡಂ ಮಿಲ್ನೆ ಮತ್ತು ಟ್ರೆಂಟ್ ಬೌಲ್ಟ್. :@ImRo45 & # 2nd # T20I. @ ▶️ ://./9m3WflcL1Y ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.