41ನೇ ವಸಂತಕ್ಕೆ ಕಾಲಿಟ್ಟ ಎಂ.ಎಸ್.ಧೋನಿ: ಅಭಿಮಾನಿಗಳಿಂದ ಶುಭ ಹಾರೈಕೆ ನವದೆಹಲಿ: ‘ಕ್ಯಾಪ್ಟನ್ ಕೂಲ್’ ಎಂದೇ ಖ್ಯಾತರಾಗಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಇಂದು (ಗುರುವಾರ) 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಧೋನಿ ಹುಟ್ಟಹಬ್ಬದ ಅಂಗವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೇರಿದಂತೆ ಕ್ರಿಕೆಟ್‌ ಆಟಗಾರರು, ಕ್ರೀಡಾಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ಶುಭ ಹಾರೈಸುತ್ತಿದ್ದಾರೆ. ಧೋನಿ ವಿವಾಹ ವಾರ್ಷಿಕೋತ್ಸವ ಮತ್ತು ಹುಟ್ಟುಹಬ್ಬ ಆಚರಿಸಿಕೊಳ್ಳಲು ಪತ್ನಿ ಸಾಕ್ಷಿ ಅವರೊಂದಿಗೆ ಇಂಗ್ಲೆಂಡ್‌ಗೆ ತೆರಳಿದ್ದು, ಆಪ್ತರೊಂದಿಗೆ ಪಾರ್ಟಿ ಮಾಡಿ ಸಂಭ್ರಮಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಸಾಕ್ಷಿ, ‘ಹುಟ್ಟುಹಬ್ಬದ ಶುಭಾಶಯಗಳು ಮೈ ಲವ್’ ಎಂದು ಹೃದಯದ ಎಮೋಜಿ ಹಾಕುವ ಮೂಲಕ ಧೋನಿಗೆ ಶುಭ ಕೋರಿದ್ದಾರೆ. (@sakshisingh_r) ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಸೇರಿದಂತೆ ಕುಟುಂಬಸ್ಥರು ಹಾಗೂ ಸ್ನೇಹಿತರು ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಆಗಸ್ಟ್ 15, 2020ರಂದು ಧೋನಿ, ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ, ಐಪಿಎಲ್ ಕ್ರಿಕೆಟ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವನ್ನು ಮುನ್ನಡೆಸುತ್ತಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ ತಂಡವು 2007ರ ಚೊಚ್ಚಲ ಟ್ವೆಂಟಿ-20 ಹಾಗೂ 2011ರ ಏಕದಿನ ವಿಶ್ವಕಪ್‌ ಜಯಿಸಿದ ಸಾಧನೆ ಮಾಡಿದೆ. 12! ! 🦁🥳 , 💛# # # 🦁💛 ../Okb9E6a0mp & 👏 👏 ' @ - # & - . 🎂 👍 ../uxfEoPU4P9 # ../UJ6l6Fip8U # ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.