ವೆಸ್ಟ್‌ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಧವನ್ ನಾಯಕ ಮುಂಬೈ: ಮುಂಬರುವ ವೆಸ್ಟ್‌ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ನಾಯಕತ್ವದ ಹೊಣೆ ನೀಡಲಾಗಿದೆ. ಬಿಸಿಸಿಐನ ಆಯ್ಕೆ ಸಮಿತಿಯು 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು,ಕನ್ನಡಿಗ ಪ್ರಸಿದ್ಧ ಕೃಷ್ಣ ಸ್ಥಾನ ಪಡೆದಿದ್ದಾರೆ. ತಂಡದ ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ರಿಷಭ್ ಪಂತ್‌ಗೆ ವಿಶ್ರಾಂತಿ ನೀಡಲಾಗಿದೆ. ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಜುಲೈ 22 ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಎಲ್ಲ ಮೂರೂ ಪಂದ್ಯಗಳು ಇಲ್ಲಿಯೇ ನಡೆಯಲಿವೆ.. ಏಕದಿನ ಸರಣಿ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಟಿ–20 ಸರಣಿ ನಡೆಯಲಿದೆ. 16 ಸದಸ್ಯರ ಭಾರತ ತಂಡ ಇಂತಿದೆ: ಶಿಖರ್ ಧವನ್(ನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್ಷದೀಪ್ ಸಿಂಗ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.