ಅಪ್ಪನಾದ ದಿನೇಶ್ ಕಾರ್ತಿಕ್; ಅವಳಿ ಮಕ್ಕಳಿಗೆ ಜನ್ಮ ನೀಡಿದ ದೀಪಿಕಾ ಪಳ್ಳಿಕಲ್ ನವದೆಹಲಿ: ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರ ಪತ್ನಿ, ಸ್ಕ್ವಾಷ್ ಆಟಗಾರ್ತಿ ಪಳ್ಳಿಕಲ್, ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವಳಿ ಗಂಡು ಮಕ್ಕಳಿಗೆ ತಂದೆಯಾದ ಶುಭ ಸುದ್ದಿಯನ್ನು ಸ್ವತಃ ದಿನೇಶ್ ಕಾರ್ತಿಕ್ ಅವರೇ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಮಾನಿಗಳೊಂದಿಗೆ ಹಂಚಿದ್ದಾರೆ. ಇದನ್ನೂ ಓದಿ: 2022: ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು ಕೈಬಿಡಲಿರುವ ಮುಂಬೈ ಇಂಡಿಯನ್ಸ್? 3 5 🤍 👶 ❤️ ../Rc2XqHvPzU ಈ ಸಂತಸದ ಕ್ಷಣದಲ್ಲಿ ಮಕ್ಕಳ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಕಬೀರ್ ಪಳ್ಳಿಕಲ್ ಕಾರ್ತಿಕ್ ಹಾಗೂ ಝಿಯಾನ್ ಪಳ್ಳಿಕಲ್ ಕಾರ್ತಿಕ್ ಎಂದು ನಾಮಕರಣ ಮಾಡಲಾಗಿದೆ. ದೀಪಿಕಾ ಪಳ್ಳಿಕಲ್ ಸಹ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಅಂತ್ಯಗೊಂಡ ಐಪಿಎಲ್ ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್ ಪ್ರತಿನಿಧಿಸಿದ್ದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ರನ್ನರ್-ಅಪ್ ಪ್ರಶಸ್ತಿ ಜಯಿಸಿತ್ತು. ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಅಂತರದ ಸೋಲಿಗೆ ಶರಣಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.