T20 : ಶತಕ ಸಿಡಿಸಿ ವಿಶಿಷ್ಟ ದಾಖಲೆ ಬರೆದ ಜೋಸ್ ಬಟ್ಲರ್ ಶಾರ್ಜಾ: ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಇಂಗ್ಲೆಂಡ್‌ನ ಜೋಸ್ ಬಟ್ಲರ್ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ. ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಶಾರ್ಜಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬಟ್ಲರ್ ಸ್ಮರಣೀಯ ಶತಕ ಗಳಿಸಿದರು. ಇದನ್ನೂ ಓದಿ: ✅ ✅ IT20 ✅@ ' ! 👏 #T20WorldCup | # ../ ಈ ಮೂಲಕ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿದ ಇಂಗ್ಲೆಂಡ್‌ನ ಮೊತ್ತ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಭಾಜನರಾಗಿದ್ದಾರೆ. ಈ ಹಿಂದೆಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲೂ ಶತಕ ಗಳಿಸಿದ್ದಾರೆ. ಅಂತೆಯೇ 2021ನೇ ಸಾಲಿನ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ಮೊದಲ ಶತಕವೂ ಇದಾಗಿದೆ. ಲಂಕಾ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಬಟ್ಲರ್ 67 ಎಸೆತಗಳಲ್ಲಿ ಶತಕ ಗಳಿಸಿದರು. ಇಂಗ್ಲೆಂಡ್ ಇನ್ನಿಂಗ್ಸ್‌ನ ಅಂತಿಮ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಬಟ್ಲರ್ ಮೈಲಿಗಲ್ಲು ತಲುಪಿದರು. ಬಟ್ಲರ್ ಮನಮೋಹಕ ಇನ್ನಿಂಗ್ಸ್‌ನಲ್ಲಿ ತಲಾ ಆರು ಸಿಕ್ಸರ್ ಹಾಗೂ ಬೌಂಡರಿಗಳು ಸೇರಿದ್ದವು. 👏 ' #T20WorldCup 2021.# ../XsLkKWq0gW (@) ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.