T20 : ಐರ್ಲೆಂಡ್ ವಿರುದ್ಧ ಗೆಲುವು, ಸೂಪರ್-12 ಹಂತಕ್ಕೆ ಲಂಕಾ ಲಗ್ಗೆ ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ 'ಎ' ಗುಂಪಿನಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾ 70 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸತತ ಎರಡನೇ ಗೆಲುವು ದಾಖಲಿಸಿದ್ದು, ಸೂಪರ್-12 ಹಂತಕ್ಕೆ ಪ್ರವೇಶಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ವನಿಂದು ಹಸರಂಗ(71) ಹಾಗೂ ಪಾತುಮ್ ನಿಸಂಕಾ (61)ಬಿರುಸಿನ ಅರ್ಧಶತಕಗಳ ನೆರವಿನಿಂದ ಏಳು ವಿಕೆಟ್ ನಷ್ಟಕ್ಕೆ 171 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಲಂಕಾ ಎಂಟು ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಜೊತೆಗೂಡಿದ ನಿಸಂಕಾ ಹಾಗೂ ವನಿಂದು ನಾಲ್ಕನೇ ವಿಕೆಟ್‌ಗೆ 123 ರನ್‌ಗಳ ಜೊತೆಯಾಟ ಕಟ್ಟಿದರು. 12 💪#T20WorldCup | # | ://./ ../oE9rPQSUsr 47 ಎಸೆತಗಳನ್ನು ಎದುರಿಸಿದ ಹಸರಂಗ 10 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 71 ರನ್ ಗಳಿಸಿದರು. ಅತ್ತ ನಿಸಂಕಾ 47 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು. ಐರ್ಲೆಂಡ್ ಪರ ಜೋಶುವಾ ಲಿಟ್ಲ್ 23 ರನ್ ತೆತ್ತು ನಾಲ್ಕು ವಿಕೆಟ್ ಕಬಳಿಸಿದರು. ಬಳಿಕ ಗುರಿ ಬೆನ್ನತ್ತಿದ ಐರ್ಲೆಂಡ್ 18.3 ಓವರ್‌ಗಳಲ್ಲಿ ಕೇವಲ 101 ರನ್‌ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕ ಆಂಡ್ರ್ಯೂ ಬಾಲ್ಬಿರ್ನಿ (41) ಹಾಗೂ ಕರ್ಟಿಸ್ ಕ್ಯಾಂಫರ್ (24) ಹೊರತುಪಡಿಸಿ ಇತರೆ ಯಾವ ಬ್ಯಾಟರ್‌ಗಳು ಮಿಂಚಲಿಲ್ಲ. ಲಂಕಾ ಪರ ಮಹೀಶ್‌ ತೀಕ್ಷನ ಮೂರು ವಿಕೆಟ್ ಪಡೆದರು. ☝️ ' 41 .#T20WorldCup | # | ://./ ../H6xtNANBTc ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.