ಭಾರತ ‘ಎ’ ತಂಡಕ್ಕೆ ಪ್ರಿಯಾಂಕ್ ಪಾಂಚಾಲ್ ನವದೆಹಲಿ: ಬೆಂಗಳೂರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ‘ಎ’ ತಂಡದ ಎದುರಿನ ‘ಟೆಸ್ಟ್‌’ ಪಂದ್ಯಗಳಲ್ಲಿ ಆಡುವ ಭಾರತ ಎ ತಂಡಕ್ಕೆ ಪ್ರಿಯಾಂಕ್ ಪಾಂಚಾಲ್ ನಾಯಕತ್ವ ವಹಿಸುವ ನಿರೀಕ್ಷೆ ಇದೆ. ಚೇತನ್ ಶರ್ಮಾ ಅಧ್ಯಕ್ಷತೆಯ ರಾಷ್ಟ್ರೀಯ ಆಯ್ಕೆ ಸಮಿತಿಯು ಸೋಮವಾರ ತಂಡವನ್ನು ಪ್ರಕಟಿಸಲಿದೆ. ಪಾಂಚಾಲ್ ಅವರು ಈಚೆಗೆ ದಕ್ಷಿಣ ಆಫ್ರಿಕಾ ಎ ತಂಡದ ಎದುರಿನ ಸರಣಿಯಲ್ಲಿಯೂ ನಾಯಕತ್ವ ವಹಿಸಿದ್ದರು. ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಅನುಭವಿ ಆಟಗಾರ ಅಜಿಂಕ್ಯ ರಹಾನೆ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಆ ಮೂಲಕ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳುವ ಪ್ರಯತ್ನ ಮಾಡಲಿದ್ದಾರೆ. ಕಳೆದ ಐಪಿಎಲ್ ಟೂರ್ನಿಯಲ್ಲಿ ರಹಾನೆ ತೊಡೆಸ್ನಾಯುವಿನ ಗಾಯಕ್ಕೊಳಗಾಗಿದ್ದರು. ಈಗ ಚೇತರಿಸಿಕೊಂಡಿರುವ ಅವರು ತಂಡಕ್ಕೆ ಮರಳಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.