T20 : ಟೀಮ್ ಇಂಡಿಯಾದ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಇಂತಿದೆ ದುಬೈ: ಐಪಿಎಲ್ ಬೆನ್ನಲ್ಲೇ ಯುಎಇ ಹಾಗೂ ಒಮಾನ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್ ಆಯೋಜನೆಯಾಗಲಿದೆ. ಭಾರತ ತಂಡವು ತನ್ನ ಮೊದಲ ಮುಖಾಮುಖಿಯಲ್ಲಿ ಅಕ್ಟೋಬರ್ 24ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ. ಇದಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯಗಳಲ್ಲಿಟೀಮ್ ಇಂಡಿಯಾ ಭಾಗವಹಿಸಲಿದೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿರುವ ವಿರಾಟ್ ಕೊಹ್ಲಿ ಬಳಗವು ಭರ್ಜರಿ ಪೂರ್ವ ತಯಾರಿಯನ್ನು ನಡೆಸಲಿದೆ. ಇದನ್ನೂ ಓದಿ:T20 : ಟೀಮ್ ಇಂಡಿಯಾ ಬಯೋಬಬಲ್‌ ಸೇರಲಿರುವ ಆವೇಶ್, ಅಯ್ಯರ್ ಭಾರತದ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಇಂತಿದೆ: ಅ. 18: ಇಂಗ್ಲೆಂಡ್ ವಿರುದ್ಧ, ದುಬೈ ಅ. 20: ಆಸ್ಟ್ರೇಲಿಯಾ ವಿರುದ್ಧ, ದುಬೈ ಟೂರ್ನಿಯಲ್ಲಿ ಒಟ್ಟು 16 ಅಭ್ಯಾಸ ಪಂದ್ಯಗಳು ನಡೆಯಲಿವೆ. ಇವೆಲ್ಲವೂ ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿವೆ. ಅತ್ತ ಪಾಕಿಸ್ತಾನ ತಂಡವು ವೆಸ್ಟ್‌ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಸೆಣಸಲಿವೆ. ಇದನ್ನೂ ಓದಿ:T20 : ಟ್ವೆಂಟಿ-20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾದ ನೂತನ ಸಮವಸ್ತ್ರ ಅನಾವರಣ ಬಿಸಿಸಿಐ ಆತಿಥ್ಯ ವಹಿಸುತ್ತಿರುವ ಟ್ವೆಂಟಿ-20 ವಿಶ್ವಕಪ್ ಯುಎಇ ಹಾಗೂ ಒಮಾನ್‌ನಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಟೂರ್ನಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸ್ಥಳಾಂತರಿಸಲಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.