T20 : ವಿಕೆಟ್ ಬೇಟೆ; ಮಾಲಿಂಗ ದಾಖಲೆ ಮುರಿದ ಶಕೀಬ್ ಅಲ್ ಅಮೆರತ್: ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಗಳಿಸಿರುವ ಬಾಂಗ್ಲಾದೇಶದ ಎಡಗೈ ಆಫ್ ಸ್ಪಿನ್ನರ್ ಶಕೀಬ್ ಅಲ್ ಹಸನ್ (108 ವಿಕೆಟ್) ನೂತನ ವಿಶ್ವ ದಾಖಲೆ ಬರೆದಿದ್ದಾರೆ. ಈ ಮೂಲಕ ಶ್ರೀಲಂಕಾದ ದಿಗ್ಗಜ ಬೌಲರ್ ಲಸಿತ್ ಮಾಲಿಂಗ (107 ವಿಕೆಟ್) ದಾಖಲೆಯನ್ನು ಮುರಿದಿದ್ದಾರೆ. ಇದನ್ನೂ ಓದಿ:T20 : ಪಪುವಾ ನ್ಯೂಗಿನಿ ವಿರುದ್ಧ 10 ವಿಕೆಟ್ ಜಯ; ಒಮನ್ ಶುಭಾರಂಭ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ 'ಬಿ' ಗುಂಪಿನಲ್ಲಿ ಭಾನುವಾರ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಶಕೀಬ್ ಸ್ಮರಣೀಯ ಮೈಲಿಗಲ್ಲು ತಲುಪಿದ್ದಾರೆ. ತಮ್ಮ 89ನೇ ಪಂದ್ಯದಲ್ಲಿ (88 ಇನ್ನಿಂಗ್ಸ್) ಶಕೀಬ್, ಮಾಲಿಂಗ ದಾಖಲೆಯನ್ನು ಮುರಿದಿದ್ದಾರೆ. ಮಾಲಿಂಗ 84 ಪಂದ್ಯಗಳಲ್ಲಿ 107 ವಿಕೆಟ್ ಗಳಿಸಿದ್ದಾರೆ. 🎆# # #T20WorldCup ://./CMgg556OSf ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಾಲಿಂಗ ಹಾಗೂ ಶಕೀಬ್ ಮಾತ್ರ 100ಕ್ಕೂ ಹೆಚ್ಚು ವಿಕೆಟ್ ಗಳಿಸಿದ್ದಾರೆ. ಇನ್ನು ಪಟ್ಟಿಯಲ್ಲಿ ಭಾರತೀಯರ ಪೈಕಿ ಯಜುವೇಂದ್ರ ಚಾಹಲ್ 63 ಹಾಗೂ ಜಸ್‌ಪ್ರೀತ್ ಬೂಮ್ರಾ 59 ವಿಕೆಟ್‌ಗಳನ್ನು ಗಳಿಸಿದ್ದಾರೆ. ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಸರದಾರರು: 1. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 108 2. ಲಸಿತ್ ಮಾಲಿಂಗ (ಶ್ರೀಲಂಕಾ): 107 3. ಟಿಮ್ ಸೌಥಿ (ನ್ಯೂಜಿಲೆಂಡ್): 99 4. ಶಾಹೀದ್ ಆಫ್ರಿದಿ (ಪಾಕಿಸ್ತಾನ): 98 5. ರಶೀದ್ ಖಾನ್ (ಅಫ್ಗಾನಿಸ್ತಾನ): 95 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.