ಪ್ಲೇ-ಆಫ್ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಬಯೋಬಬಲ್ ತೊರೆದ ಇಬ್ಬರು ಆಟಗಾರರು ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಯೋಬಬಲ್‌ನಿಂದ ಶ್ರೀಲಂಕಾದ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಲಾಗಿದೆ. ಮುಂಬರುವ ಟ್ವೆಂಟಿ-20 ವಿಶ್ವಕಪ್‌ ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ ಭಾಗವಹಿಸಲಿರುವುದರಿಂದ ವನಿಂದು ಹಸರಂಗ ಹಾಗೂ ದುಶ್ಮಂತ ಚಮೀರ ಅವರಿಗೆ ರಾಷ್ಟ್ರೀಯ ತಂಡಕ್ಕೆ ಸೇರಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ:‘ಕಿಂಗ್ ಈಸ್ ಬ್ಯಾಕ್’: ಧೋನಿ ಅದ್ಭುತ ಫಿನಿಷರ್ ಎಂದು ಹಾಡಿಹೊಗಳಿದ ವಿರಾಟ್ ಕೊಹ್ಲಿ ಇದರೊಂದಿಗೆ ಐಪಿಎಲ್‌ ಪ್ಲೇ-ಆಫ್ ಹಂತದಲ್ಲಿ ಆರ್‌ಸಿಬಿ ಸೇವೆಗೆ ಅಲಭ್ಯರಾಗಿದ್ದಾರೆ. ಯುಎಇನಲ್ಲಿ ನಡೆಯುತ್ತಿರುವ ಎರಡನೇ ಹಂತದ ಟೂರ್ನಿಗಾಗಿ ಆಸ್ಟ್ರೇಲಿಯಾದ ಆ್ಯಡಂ ಜಂಪಾ ಹಾಗೂ ಡೇನಿಯಲ್ ಸ್ಯಾಮ್ಸ್ ಸ್ಥಾನಕ್ಕೆಹಸರಂಗ ಹಾಗೂ ಚಮೀರ ಅವರನ್ನು ಹೆಸರಿಸಲಾಗಿತ್ತು. & #WT20 . & & #IPL2021. # ../m8U2p4YaiK ಹಸರಂಗ ಎರಡು ಪಂದ್ಯಗಳಲ್ಲಿ ಆಡಿದರೂ ಪ್ರಭಾವಿ ಎನಿಸಿಕೊಳ್ಳಲಿಲ್ಲ. ಅತ್ತ ಚಮೀರಗೆ ಅವಕಾಶ ಸಿಗಲಿಲ್ಲ. ಈ ಕುರಿತು ಟ್ವೀಟ್ ಮಾಡಿರುವ ಆರ್‌ಸಿಬಿ, ಹಸರಂಗ ಹಾಗೂ ಚಮೀರ ವೃತ್ತಿಪರತೆ ಹಾಗೂ ಕಠಿಣ ಪರಿಶ್ರಮಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದೆ. ಸೋಮವಾರ ನಡೆಯಲಿರುವ ಎಲಿಮಿನೇಟರ್ ಹಣಾಹಣಿಯಲ್ಲಿ ವಿರಾಟ್ ಕೊಹ್ಲಿ ಬಳಗವು ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ. ಟ್ವೆಂಟಿ-20 ವಿಶ್ವಕಪ್‌ ಅರ್ಹತಾ ಸುತ್ತಿನಲ್ಲಿ ಅಕ್ಟೋಬರ್ 18ರಂದು ನಡೆಯಲಿರುವ 'ಎ' ಗುಂಪಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.