ವಿರಾಟ್ ದಾಖಲೆ ಮುರಿದು ರೋಹಿತ್ ಸಾಧನೆ ಸರಿಗಟ್ಟಿದ ಬಾಬರ್ ನವದೆಹಲಿ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ನಿಕಟ ಪೈಪೋಟಿ ಒಡ್ಡುತ್ತಿರುವ ಪಾಕಿಸ್ತಾನದ ಬಾಬರ್ ಆಜಂ ಮಗದೊಂದು ದಾಖಲೆ ಬರೆದಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ನ್ಯಾಷನಲ್ ಟಿ20 ಕಪ್‌ನಲ್ಲಿ ಶತಕ ಬಾರಿಸಿರುವ ಬಾಬರ್, ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಇದನ್ನೂ ಓದಿ: 2021: ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಐಪಿಎಲ್ ಕೆರಿಯರ್ ಅಂತ್ಯ? ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಆರನೇ ಶತಕ ಗಳಿಸಿರುವ ಬಾಬರ್ ಈಗ ರೋಹಿತ್ ಶರ್ಮಾ ಸಾಧನೆಯನ್ನು ಸರಿಗಟ್ಟಿದ್ದಾರೆ. ' 100 170 11 3 🔥🔥 6th T20 .# #NationalT20Cup ../1RSgpwku39 ಈ ಮೂಲಕ ಏಷ್ಯಾದ ಅಗ್ರ ಟಿ20 ಬ್ಯಾಟ್ಸ್‌ಮನ್‌ಗಳ ಸಾಲಿಗೆ ಸೇರ್ಪಡೆಯಾಗಿದ್ದಾರೆ. 193ನೇ ಪಂದ್ಯದಲ್ಲಿ ಬಾಬರ್ ಈ ಸಾಧನೆ ಮಾಡಿದ್ದಾರೆ. ಸೆಂಟ್ರಲ್ ಪಂಜಾಬ್ ತಂಡವನ್ನು ಮುನ್ನಡೆಸುತ್ತಿರುವ ಬಾಬರ್ 63 ಎಸೆತಗಳಲ್ಲಿ 105 ರನ್ ಗಳಿಸಿದರು. ಟಿ20 ಮಾದರಿಯಲ್ಲಿ ರೋಹಿತ್ ಶರ್ಮಾ 353 ಪಂದ್ಯಗಳಲ್ಲಿ ಆರು ಮತ್ತು ವಿರಾಟ್ ಕೊಹ್ಲಿ 315 ಪಂದ್ಯಗಳಲ್ಲಿ ಐದು ಶತಕಗಳನ್ನು ಗಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.