ವಿಶ್ವಕಪ್ ಗೆಲುವನ್ನು ನೆನಪಿಸಿದ ಧೋನಿ ವಿಂಟೇಜ್ ಸಿಕ್ಸರ್; ಅಭಿಮಾನಿಗಳ ಸಂಭ್ರಮ ಶಾರ್ಜಾ: ಐಪಿಎಲ್‌ನಲ್ಲಿ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿನ ಸಿಕ್ಸರ್ ಬಾರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಗದೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ. ಕಳಪೆ ಫಾರ್ಮ್‌ ಹಾಗೂ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಧೋನಿ ವಿಮರ್ಶೆಗೆ ಒಳಗಾಗಿದ್ದರು. ಆರಂಭದಲ್ಲಿ ರನ್ ಗಳಿಸಲು ತಡಕಾಡಿದರೂ ಬಳಿಕ ಗೆಲುವಿನ ಸಿಕ್ಸರ್ ಬಾರಿಸುವ ಮೂಲಕ ತಮ್ಮಲ್ಲಿ ಬ್ಯಾಟಿಂಗ್ ಶಕ್ತಿ ಇನ್ನೂ ಬಾಕಿಯಿದೆ ಎಂಬುದನ್ನು ಸಾಬೀತು ಮಾಡಿದರು. ಇದನ್ನೂ ಓದಿ: 2021: ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಐಪಿಎಲ್ ಕೆರಿಯರ್ ಅಂತ್ಯ? . # ../S8T2zPJycO ಇದು ಅಭಿಮಾನಿಗಳಲ್ಲೂ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 2011ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಧೋನಿ ಸಿಕ್ಸರ್ ಎತ್ತುವ ಮೂಲಕ ಭಾರತ 28 ವರ್ಷಗಳ ಬಳಿಕ ಟ್ರೋಫಿ ಜಯಿಸಿತ್ತು. 'ಬೆಸ್ಟ್ ಫಿನಿಶರ್' ಎಂಬ ಬಿರುದಿಗೆ ಪಾತ್ರವಾಗಿರುವ ಧೋನಿ, ಸಿಕ್ಸರ್ ಬಾರಿಸುವ ಮೂಲಕ ಟೀಮ್ ಇಂಡಿಯಾ ಹಾಗೂ ತಮ್ಮ ಐಪಿಎಲ್ ತಂಡವಾದ ಚೆನ್ನೈಗೆ ಅನೇಕ ಸ್ಮರಣೀಯ ಗೆಲುವುಗಳನ್ನು ಒದಗಿಸಿಕೊಟ್ಟಿದ್ದಾರೆ. ಈಗ 40 ಹರೆಯದಲ್ಲೂ ಮತ್ತದೇ ಸಾಮರ್ಥ್ಯವನ್ನು ಸಾಬೀತು ಮಾಡುವ ಮೂಲಕ ಎದುರಾಳಿಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. .@ # ! 👏 👏 @- # & . 👌 👌 # # 👉 ://./QPrhO4XNVr ../78dMU8g17b 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ-ಆಫ್ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಚೆನ್ನೈ ಪಾತ್ರವಾಗಿದೆ. # ||• # ||• # ../hL0kbMMsAb " " !! 💥🏌🏼‍♂️ * * # | # ../1LtGicgnCY ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.