ಕಿಂಗ್ ಕೊಹ್ಲಿ ಐತಿಹಾಸಿಕ ಸಾಧನೆ; ಟಿ20 ಕ್ರಿಕೆಟ್‌ನಲ್ಲಿ 10,000 ರನ್ ಮೈಲಿಗಲ್ಲು ದುಬೈ: ರನ್ ಮೆಶಿನ್ ಖ್ಯಾತಿಯ ವಿರಾಟ್ ಕೊಹ್ಲಿ ಮಗದೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಟ್ವೆಂಟಿ-20 ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲಿಗಲ್ಲು ತಲುಪಿದ್ದಾರೆ. ಅಷ್ಟೇ ಯಾಕೆ ಈ ಸಾಧನೆ ಮಾಡಿದ ವಿಶ್ವದ ಐದನೇ ಹಾಗೂ ಭಾರತದ ಮೊಟ್ಟಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: 2021 | : ಕೊಹ್ಲಿ, ಮ್ಯಾಕ್ಸ್‌ವೆಲ್ ಫಿಫ್ಟಿ: ಆರ್‌ಸಿಬಿ 165/6 ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಐತಿಹಾಸಿಕ ದಾಖಲೆ ಬರೆದರು. ಸಿಕ್ಸರ್ ಬಾರಿಸುವ ಮೂಲಕ ಕಿಂಗ್ ಕೊಹ್ಲಿ, ಟಿ20 ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲಿಗಲ್ಲು ಕ್ರಮಿಸಿದ್ದಾರೆ. 🔥❤ 10,000 T20 , 🙌🏻# # # ../zdjFsxyN90 ಮುಂಬೈ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಕೊಹ್ಲಿ, ಐಪಿಎಲ್‌ನಲ್ಲಿ 42ನೇ ಅರ್ಧಶತಕ ಸಾಧನೆ ಮಾಡಿದರು. 37 ಎಸೆತಗಳನ್ನು ಎದುರಿಸಿದ ಕೊಹ್ಲಿ, ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು. ಅಂದ ಹಾಗೆ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯು ವೆಸ್ಟ್‌ಇಂಡೀಸ್‌ನ ದೈತ್ಯ ಕ್ರಿಸ್ ಗೇಲ್ ಹೆಸರಲ್ಲಿದೆ. ಅವರು ಒಟ್ಟು 14,275 ರನ್ ಗಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸರದಾರರು: 1. ಕ್ರಿಸ್ ಗೇಲ್ (ವೆಸ್ಟ್‌ಇಂಡೀಸ್): 14,275 2. ಕೀರನ್ ಪೊಲಾರ್ಡ್ (ವೆಸ್ಟ್‌ಇಂಡೀಸ್): 11,195 3. ಶೋಯಬ್ ಮಲಿಕ್ (ಪಾಕಿಸ್ತಾನ): 10,808 4. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): 10,019 5. ವಿರಾಟ್ ಕೊಹ್ಲಿ (ಭಾರತ): 10,000* ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.