ಭಾರತ ಎ ತಂಡಕ್ಕೆ ಪಾಂಚಾಲ್ ನಾಯಕ: ಪ್ರಸಿದ್ಧಗೆ ಸ್ಥಾನ ನವದೆಹಲಿ: ಭಾರತ ಎ ಕ್ರಿಕೆಟ್ ತಂಡಕ್ಕೆ ಗುಜರಾತ್ ಬ್ಯಾಟರ್ ಪ್ರಿಯಾಂಕ್ ಪಾಂಚಾಲ್ ಅವರನ್ನು ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಕನ್ನಡಿಗ ಪ್ರಸಿದ್ಧಕೃಷ್ಣ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿಯು ಬುಧವಾರ 16 ಆಟಗಾರರ ತಂಡವನ್ನು ಪ್ರಕಟಿಸಿದೆ. ಜಮ್ಮು ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್ ಅವರಿಗೂ ಸ್ಥಾನ ಲಭಿಸಿದೆ. ಸೆ.1 ರಿಂದ ‘ಟೆಸ್ಟ್’ ಸರಣಿ ನಡೆಯಲಿದೆ. ಮೂರು ಪಂದ್ಯಗಳು ನಡೆಯಲಿವೆ. ಮೊದಲ ಹಾಗೂ ಮೂರನೇ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಎರಡನೇ ಪಂದ್ಯವು ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಮೈದಾನದಲ್ಲಿ ನಡೆಯಲಿದೆ. ಏಕದಿನ ಪಂದ್ಯಗಳೂ ಚೆನ್ನೈನಲ್ಲಿ ಜರುಗಲಿವೆ. ತಂಡ: ಪ್ರಿಯಾಂಕ್ ಪಾಂಚಾಲ್ (ನಾಯಕ), ಅಭಿಮನ್ಯು ಈಶ್ವರನ್, ಋತುರಾಜ್ ಗಾಯಕವಾಡ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಕೆ.ಎಸ್. ಭರತ್ (ವಿಕೆಟ್‌ಕೀಪರ್), ಉಮೇಂದ್ರ ಯಾದವ್ (ವಿಕೆಟ್‌ಕೀಪರ್), ಕುಲದೀಪ್ ಯಾದವ್, ಸೌರಭ್ ಕುಮಾರ್, ರಾಹುಲ್ ಚಾಹರ್, ಪ್ರಸಿದ್ಧಕೃಷ್ಣ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಯಶ್ ದಯಾಳ್, ಅರ್ಜಾನ್ ನಾಗವಾಸ್ವಲ್ಲಾ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.