ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ತಂಡ ಪ್ರಕಟ: ಶಿಖರ್‌ ಧವನ್‌ಗೆ ನಾಯಕತ್ವ ನವದೆಹಲಿ: ಮುಂದಿನ ತಿಂಗಳು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್‌ ಸರಣಿಗೆ ಬಿಸಿಸಿಐ ಶನಿವಾರ ತಂಡ ಪ್ರಕಟಿಸಿದೆ. ಶಿಖರ್‌ ಧವನ್‌ಗೆ ನಾಯಕತ್ವವನ್ನು ವಹಿಸಲಾಗಿದೆ. ಹಲವು ಕಾರಣಗಳಿಂದಾಗಿ ಈ ಸರಣಿಯಿಂದ ಕೆ.ಎಲ್‌ ರಾಹುಲ್‌ ಅವರನ್ನು ಕೈಬಿಡಲಾಗಿದೆ. ಈ ಬೆಳವಣಿಗೆಯು ಟಿ20 ವಿಶ್ವಕಪ್‌ನಲ್ಲಿ ಆಡುವ ಅವರ ಅವಕಾಶಗಳಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಮತ್ತೊಂದುಕಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ರಿಷಭ್‌ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಇತರ ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಗಸ್ಟ್ 18, 20 ಮತ್ತು 22 ರಂದು ಜಿಂಬಾಬ್ವೆಯಲ್ಲಿ ಭಾರತ 3 ಏಕದಿನ ಪಂದ್ಯಗಳನ್ನು ಆಡಲಿದೆ. ಹರಾರೆಯಲ್ಲಿ ಮೊದಲ ಪಂದ್ಯ ನಡೆಯಲಿದೆ. ತಂಡ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಪಟೇಲ್, ಅವೆಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್. ಇದನ್ನೂ ಓದಿ:ಜಿಂಬಾಬ್ವೆ ಸರಣಿಗೆ ಆಯ್ಕೆಯಾಗದಿರುವುದಕ್ಕೆ ಸ್ಪಷ್ಟನೆ ನೀಡಿದ ಕೆ.ಎಲ್‌ ರಾಹುಲ್‌ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.