ಗಾಯದ ಸಮಸ್ಯೆ: ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಕೊಹ್ಲಿ ಅಲಭ್ಯ? ಲಂಡನ್‌: ಟೀಂ ಇಂಡಿಯಾದ ಆಟಗಾರ ವಿರಾಟ ಕೊಹ್ಲಿ ಅವರು ತೊಡೆಸಂದು ನೋವಿನಿಂದ ಬಳಲುತ್ತಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಕೆನ್ನಿಂಗ್ಟನ್‌ನ ಓವಲ್‌ನಲ್ಲಿ ನಡೆಯಲಿರುವ ಏಕದಿನ ಪಂದ್ಯಕ್ಕೂ ಮುನ್ನ ಸೋಮವಾರ ನಡೆದ ಅಭ್ಯಾಸಕ್ಕೆ ಕೊಹ್ಲಿ ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯ ನಾಳೆ ನಡೆಯಲಿದೆ. . : ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.