2nd T20| ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ ಕಟಕ್ (ಒಡಿಶಾ): ಬಾರಾಬತಿ ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ20 ಪಂದ್ಯ ನಡೆಯುತ್ತಿದೆ. ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡವು ಮೂರು ದಿನಗಳ ಹಿಂದೆ ಮೊದಲ ಟಿ20 ಪಂದ್ಯದಲ್ಲಿ ಸೋತಿತ್ತು. ಐದು ಪಂದ್ಯಗಳ ಸರಣಿಯಲ್ಲಿ ಭಾರತ 0–1ರ ಹಿನ್ನಡೆ ಅನುಭವಿಸಿತ್ತು. ಭಾರತ ತಂಡ: ಇಶಾನ್ ಕಿಶನ್, ಋತುರಾಜ್‌ ಗಾಯಕ್‌ವಾಡ್‌, ಶ್ರೇಯಸ್ ಅಯ್ಯರ್, ರಿಷಭ್‌ ಪಂತ್‌, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಯಜುವೇಂದ್ರ ಚಾಹಲ್ ತಂಡದಲ್ಲಿದ್ದಾರೆ. 2nd T20I. - ://./ # @ ://./ ../WGoEuX8X2m ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.