‘ಗ್ರೇಟ್‌ ಫಿನಿಷರ್‌’ ಧೋನಿಗೆ ಖ್ಯಾತ ಕ್ರಿಕೆಟಿಗರಿಂದ ಪ್ರಶಂಸೆಯ ಸುರಿಮಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್‌ಕಿಂಗ್ಸ್‌ ತಂಡವು ರೋಚಕ ಗೆಲುವನ್ನು ದಾಖಲಿಸಿದೆ. ಪಂದ್ಯದ ಕೊನೆಯ ಹಂತದಲ್ಲಿ ಬ್ಯಾಟಿಂಗ್‌ ಮಾಡಲು ಬಂದ ಮಹೇಂದ್ರ ಸಿಂಗ್‌ ಧೋನಿ ಅವರು ಚೆನ್ನೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಅಂತಿಮ ಓವರ್‌ನಲ್ಲಿ 16 ರನ್‌ಗಳನ್ನು ಗಳಿಸುವ ಮೂಲಕ ‘ಗ್ರೇಟ್‌ ಫಿನಿಷರ್‌’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಮುಂಬೈನ 155 ರನ್‌ ಗುರಿಯನ್ನು ಬೆನ್ನತ್ತಿದ ಚೆನ್ನೈ ಒಂದು ಹಂತದಲ್ಲಿ ಸೋಲಿನ ಭೀತಿಗೆ ಒಳಗಾಗಿತ್ತು. ಅಲ್ಲದೆ ಅಂತಿಮ ಓವರ್‌ನಲ್ಲಿ ಗೆಲುವಿಗೆ 17 ರನ್ ಬೇಕಿತ್ತು. ಆದರೆ, ಗತಕಾಲದ ವೈಭವ ಮರುಕಳಿಸಿದ ಧೋನಿ, ಎರಡು ಬೌಂಡರಿ ಹಾಗೂ ಸಿಕ್ಸರ್ ಬಾರಿಸುವ ಮೂಲಕ ಚೆನ್ನೈಗೆ ರೋಚಕ ಗೆಲುವು ಒದಗಿಸಿಕೊಟ್ಟರು. ಧೋನಿಯವರ ಅಂತಿಮ ಹಂತದ ಆಟವು ಖ್ಯಾತ ಕ್ರಿಕೆಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ವಿರೇಂದ್ರ ಸೆಹ್ವಾಗ್‌, ಹರಭಜನ್‌ ಸಿಂಗ್‌, ಸುರೇಶ್‌ ರೈನಾ ಸೇರಿದಂತೆ ಹಲವರು ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. … . . # @ 🔥🔥🔥🔥🔥@ ... ...' .. ... # #IPL20222 # 👏 @ 😂🙌 ! 💫 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.