ಕೊಹ್ಲಿ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮೈದಾನಕ್ಕೆ ನುಗ್ಗಿದ ನಾಲ್ವರು ವಶಕ್ಕೆ ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ಮೈದಾನಕ್ಕೆ ಅಕ್ರಮವಾಗಿ ನುಗ್ಗಿದ್ದ ಆರೋಪದಡಿ ನಾಲ್ವರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಪಂದ್ಯ ನಡೆಯುತ್ತಿತ್ತು. ಆಟಗಾರರಿಗೆ ವೈದ್ಯಕೀಯ ವಿಶ್ರಾಂತಿ ನೀಡಿದ್ದ ವೇಳೆ, ನಾಲ್ವರು ಅಕ್ರಮವಾಗಿ ಮೈದಾನದೊಳಗೆ ನುಗ್ಗಿದ್ದರು. ಆಟಗಾರ ವಿರಾಟ್ ಕೊಹ್ಲಿ ಬಳಿ ಓಡಾಡಿ, ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ‘ಭದ್ರತೆಯಲ್ಲಿದ್ದ ಪೊಲೀಸರೇ ನಾಲ್ವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಕೊಹ್ಲಿ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮೈದಾನಕ್ಕೆ ನುಗ್ಗಿದ್ದಾಗಿ ಅವರು ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ನಾಲ್ವರ ಪೈಕಿ ಇಬ್ಬರು ಬಾಲಕರಿದ್ದಾರೆ’ ಎಂದೂತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.