ಅಪ್ಪನಾದ ವಿನಯ್ ಕುಮಾರ್; ಹೆಣ್ಣು ಮಗುವಿಗೆ ಜನ್ಮ ನೀಡಿದ ರಿಚಾ ಸಿಂಗ್ ಬೆಂಗಳೂರು: ‘ದಾವಣಗೆರೆ ಎಕ್ಸ್‌ಪ್ರೆಸ್’ ಎಂದೇ ಖ್ಯಾತರಾದ ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ವಿನಯ್ ಕುಮಾರ್ ಪತ್ನಿ ರಿಚಾ ಸಿಂಗ್ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿನಯ್, ‘ನಮಗೆ ಹೆಣ್ಣು ಮಗು ಜನಿಸಿರುವ ಕುರಿತಾದ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ. ಇದು ನಮಗೆ ದೇವರು ಕೊಟ್ಟ ಅಮೂಲ್ಯ ಕೊಡುಗೆ ಎಂದು ಭಾವಿಸಿದ್ದೇವೆ. ನಾವು ತುಂಬಾ ಸಂತೋಷ ಮತ್ತು ಥ್ರಿಲ್ ಆಗಿದ್ದೇವೆ ಎಂದು ಬರೆದುಕೊಂಡಿದ್ದಾರೆ. . 🙏🧿 #Welcometo23 # ../9zzwxmBWRv ಇತ್ತೀಚಿಗೆ ತಮ್ಮ ಪತ್ನಿ ರಿಚಾ ಸಿಂಗ್ ಅವರ ಬೇಬಿ ಬಂಪ್ ಫೋಟೊಗಳನ್ನು ಟ್ವೀಟ್ ಮಾಡಿದ್ದ ವಿನಯ್ ಕುಮಾರ್ ನಾವೀಗ ಮೂವರಾಗುತ್ತಿದ್ದೇವೆ, ನಿಮ್ಮ ಆಶೀರ್ವಾದವಿರಲಿ ಎಂದು ಬರೆದುಕೊಂಡಿದ್ದರು. ವಿನಯ್ ಕುಮಾರ್ ಮತ್ತು ರಿಚಾ ಸಿಂಗ್ 2013ರ ನವೆಂಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.