: ಮೊದಲ ಟಿ20– ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಮೊದಲ ಟಿ–20 ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಗಾಯಗೊಂಡಿರುವ ಕೆ.ಎಲ್. ರಾಹುಲ್ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಫೋಟದ ಆಟದ ಮೂಲಕ ಗಮನ ಸೆಳೆದಿದ್ದ ದಿನೇಶ್ ಕಾರ್ತಿಕ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ತಂಡ 11ರ ಬಳಗ: ಇಶಾನ್ ಕಿಶನ್, ಋತುರಾಜ್ ಗಾಯಕವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಯಜುವೇಂದ್ರ ಚಾಹಲ್, ಅವೆಶ್ ಖಾನ್ ದಕ್ಷಿಣ ಆಫ್ರಿಕಾದ 11ರ ಬಳಗ: ಕ್ವಿಂಟನ್ ಡಿ ಕಾಕ್, ತೆಂಬ ಬವುಮಾ, ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಟ್ರಸ್ತಾನ್ ಸಟಬ್ಸ್, ವೆಯ್ನೆ ಪರ್ನೆಲ್, ಡ್ವೇನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ತಬ್ರೇಜ್ ಶಾಮ್ಸಿ, ಕಗಿಸೊ ರಬಾಡಾ, ಎನ್ರಿಚ್ ನೊರ್ಜೆ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.