ಐರ್ಲೆಂಡ್ ವಿರುದ್ಧದ ಟಿ20ಗೆ ಭಾರತ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯ ನಾಯಕ ನವದೆಹಲಿ: ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿಯೂ, ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಐಪಿಎಲ್ ಪ್ರಸಾರ ಹಕ್ಕುಗಳಿಗೆ ಜಾಕ್‌ಪಾಟ್; ಬಿಸಿಸಿಐ ಖಜಾನೆಗೆ ₹48,390 ಕೋಟಿ (), (), , , , , , , , (), , , , , , , ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕತ್ವ ವಹಿಸಿರುವ ರಿಷಭ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಐರ್ಲೆಂಡ್‌ನ ಡಲ್ಬಿನ್‌ ‘ದಿ ವಿಲೇಜ್‌’ನಲ್ಲಿ ಇದೇ 26 ಮತ್ತು 28ರಂದು ಪಂದ್ಯಗಳು ನಡೆಯಲಿವೆ. ಭಾರತ ತಂಡ; ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ಋತುರಾಜ್ ಗಾಯಕವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಆರ್. ಬಿಷ್ಣೋಯಿ, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್. : ಹರ್ಷಲ್–ಚಾಹಲ್ ಮೋಡಿ; ಪಂತ್‌ ಬಳಗಕ್ಕೆ ಜಯದ ಸಿಹಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.