2022: ಐಪಿಎಲ್‌ನಲ್ಲಿ ಅಕ್ಷರ್ ಪಟೇಲ್ 100 ವಿಕೆಟ್ ಸಾಧನೆ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಲ್‌ರೌಂಡರ್ ಅಕ್ಷರ್ ಪಟೇಲ್ 100 ವಿಕೆಟ್ ಸಾಧನೆ ಮಾಡಿದ್ದಾರೆ. ಐಪಿಎಲ್ 2022 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಅಕ್ಷರ್, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು. ಈ ಮೂಲಕ ಐಪಿಎಲ್‌ನಲ್ಲಿ 1000 ರನ್ ಹಾಗೂ 100 ವಿಕೆಟ್ ಗಳಿಸಿದ ನಾಲ್ಕನೇ ಆಟಗಾರ ಎನಿಸಿದ್ದಾರೆ. 🚨 - 100 @akshar2026 👏👏# # ../225OCK5MJv ಐಪಿಎಲ್‌ನಲ್ಲಿ 1000 ರನ್ ಹಾಗೂ 100 ವಿಕೆಟ್ ಸಾಧಕರು: ಡ್ವೇನ್ ಬ್ರಾವೊ, ರವೀಂದ್ರ ಜಡೇಜ, ಸುನಿಲ್ ನಾರಾಯಣ್, ಅಕ್ಷರ್ ಪಟೇಲ್ 120ನೇ ಇನ್ನಿಂಗ್ಸ್‌ನಲ್ಲಿ (121ನೇ ಪಂದ್ಯ) ಅಕ್ಷರ್ 100 ವಿಕೆಟ್ ಸಾಧನೆ ಮಾಡಿದರು. 21 ರನ್ ತೆತ್ತು 4 ವಿಕೆಟ್ ಗಳಿಸಿರುವುದು ಶ್ರೇಷ್ಠ ಸಾಧನೆಯಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.