2022: ತವರಿಗೆ ತೆರಳಿದ ವಿಲಿಯಮ್ಸನ್; ಕೊನೆಯ ಪಂದ್ಯಕ್ಕೆ ಅಲಭ್ಯ ಮುಂಬೈ: ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ತವರೂರಾದ ನ್ಯೂಜಿಲೆಂಡ್‌ಗೆ ಹಿಂತಿರುಗಿದ್ದಾರೆ. ಇದರಿಂದಾಗಿ ಐಪಿಎಲ್ 2022 ಟೂರ್ನಿಯಲ್ಲಿ ಕೊನೆಯ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮೇ 22ರಂದು ಹೈದರಾಬಾದ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸಲಿದೆ. 𝑶𝑭𝑭𝑰𝑪𝑰𝑨𝑳 𝑼𝑷𝑫𝑨𝑻𝑬: , . 🧡 ' # !# # ../3CFbvN60r4 ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹೈದರಾಬಾದ್ ಮೂರು ರನ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಈ ಮೂಲಕ ಪ್ಲೇ-ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದ್ದು, ಕೊನೆಯ ಪಂದ್ಯದಲ್ಲೂ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಆದರೂ ಹೈದರಾಬಾದ್ ಪ್ಲೇ-ಆಫ್ ಪ್ರವೇಶವು ಇತರೆ ಪಂದ್ಯಗಳ ಫಲಿತಾಂಶವನ್ನು ಅವಲಂಬಿಸಿರುತ್ತದೆ. 13 ಪಂದ್ಯಗಳಲ್ಲಿ ಆರು ಗೆಲುವು ದಾಖಲಿಸಿರುವ ಹೈದರಾಬಾದ್ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕೋಲ್ಕತ್ತ ಹಾಗೂ ಪಂಜಾಬ್ ಅಷ್ಟೇ ಅಂಕಗಳನ್ನು ಹೊಂದಿದ್ದು, ರನ್ ರೇಟ್ ಲೆಕ್ಕಾಚಾರದಲ್ಲಿ ಹೈದರಾಬಾದ್ ಹಿಂದೆ ಬಿದ್ದಿದೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿರುವ ವಿಲಿಯಮ್ಸನ್, 13 ಪಂದ್ಯಗಳಲ್ಲಿ 216 ರನ್ ಗಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.