2022: ಟ್ವೆಂಟಿ-20 ಕ್ರಿಕೆಟ್‌ನಲ್ಲಿ ರಿಷಭ್ ಪಂತ್ 4,000 ರನ್ ಸಾಧನೆ ಮುಂಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಎಡಗೈ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 4,000 ರನ್‌ಗಳ ಸಾಧನೆ ಮಾಡಿದ್ದಾರೆ. ಐಪಿಎಲ್ 2022 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿರುವ ಪಂತ್, ಬುಧವಾರ ಡಿ.ವೈ. ಪಾಟೀಲ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು. ಇದನ್ನೂ ಓದಿ: 2022: ಜಡೇಜ ಅವರನ್ನು ಅನ್‌ಫಾಲೋ ಮಾಡಿದ ಚೆನ್ನೈ ಫ್ರಾಂಚೈಸ್: ವರದಿ ಕೊನೆಯ ಹಂತದಲ್ಲಿ ಕ್ರೀಸಿಗಿಳಿದಿದ್ದ ಪಂತ್ ಕೇವಲ ನಾಲ್ಕು ಎಸೆತಗಳಲ್ಲಿ ಎರಡು ಸಿಕ್ಸರ್ ಸೇರಿದಂತೆ 13 ರನ್ ಗಳಿಸಿ ಔಟಾಗದೆ ಉಳಿದರು. , 🤩🔥 4️⃣0️⃣0️⃣0️⃣ T20 💙# | #IPL2022 | # | # | # | # | @RishabhPant17 ../QcZ5jPc2o7 ಚುಟುಕು ಮಾದರಿಯಲ್ಲಿ 154 ಪಂದ್ಯಗಳಲ್ಲಿ ಪಂತ್ 33.09ರ ಸರಾಸರಿಯಲ್ಲಿ ಒಟ್ಟು 4004 ರನ್ ಗಳಿಸಿದ್ದಾರೆ. ಪಂತ್ 146.55ರ ಸ್ಟ್ರೈಕ್‌ರೇಟ್ ಕಾಪಾಡಿಕೊಂಡಿದ್ದು, 22 ಅರ್ಧಶತಕಗಳನ್ನು ಹೊಂದಿದ್ದಾರೆ. ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಂಟು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಡೆಲ್ಲಿ, ಪ್ಲೇ-ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದೆ. ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ ತಲಾ ಆರು ಗೆಲುವು ಹಾಗೂ ಸೋಲಿನೊಂದಿಗೆ ಒಟ್ಟು 12 ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.