2022: ಗಾಯಾಳು ರವೀಂದ್ರ ಜಡೇಜ ಐಪಿಎಲ್‌ನಿಂದ ಔಟ್ ಮುಂಬೈ: ಗಾಯದ ಸಮಸ್ಯೆ ಎದುರಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜ ಐಪಿಎಲ್‌ 2022 ಟೂರ್ನಿಯ ಉಳಿದಿರುವ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದರೊಂದಿಗೆ ಚೆನ್ನೈ ಪ್ಲೇ-ಆಫ್ ಪ್ರವೇಶದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಇದನ್ನೂ ಓದಿ: 2022: ಐಪಿಎಲ್‌ನಲ್ಲಿ ರವಿಚಂದ್ರನ್ ಅಶ್ವಿನ್ ಚೊಚ್ಚಲ ಅರ್ಧಶತಕ ಸಾಧನೆ ಮೇ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದ ವೇಳೆ ಕ್ಯಾಚ್ ಪಡೆಯಲು ವಿಫಲ ಯತ್ನ ನಡೆಸಿದಾಗ ಜಡೇಜ ಗಾಯಗೊಂಡಿದ್ದರು. ಕಳೆದ ಪಂದ್ಯದಲ್ಲೂ ಜಡೇಜ ಆಡಿರಲಿಲ್ಲ. 📢 : . ! @ ಟೂರ್ನಿ ಆರಂಭಕ್ಕೂ ಮುನ್ನ ಜಡೇಜ ಅವರಿಗೆ ಮಹೇಂದ್ರ ಸಿಂಗ್ ಧೋನಿ, ನಾಯಕ ಸ್ಥಾನ ಹಸ್ತಾಂತರಿಸಿದ್ದರು. ಆದರೆ ತಂಡದ ಕಳಪೆ ನಿರ್ವಹಣೆಯ ಹಿನ್ನೆಲೆಯಲ್ಲಿ ಟೂರ್ನಿ ಮಧ್ಯೆ ಮತ್ತೆ ಧೋನಿಗೆ ನಾಯಕ ಪಟ್ಟ ಹಸ್ತಾಂತರಿಸಿದ್ದರು. ಇದುವರೆಗೆ 11 ಪಂದ್ಯಗಳನ್ನು ಆಡಿರುವ ಚೆನ್ನೈ, ನಾಲ್ಕು ಗೆಲುವಿನೊಂದಿಗೆ ಒಟ್ಟು ಎಂಟು ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. 2022 # #IPL2022pic../9Ld75WaN8c . ! @ .....# ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.