2022: ಮುಂಬೈ ಪ್ಲೇ-ಆಫ್ ಕನಸು ಭಗ್ನ; ಟೂರ್ನಿಯಿಂದ ಹೊರಕ್ಕೆ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪ್ಲೇ-ಆಫ್ ಕನಸು ಭಗ್ನಗೊಂಡಿದೆ. ಇದರೊಂದಿಗೆ ಐಪಿಎಲ್ 2022 ಟೂರ್ನಿಯಿಂದ ನಿರ್ಗಮಿಸಿದ ಮೊದಲ ತಂಡವೆಂಬ ಅಪಖ್ಯಾತಿಗೆ ಒಳಗಾಗಿದೆ. ಇದನ್ನೂ ಓದಿ: 2022 : ಚಾಹಲ್, ಜೈಸ್ವಾಲ್ ಮಿಂಚು; ಮುಗ್ಗರಿಸಿದ ಮಯಂಕ್ ಪಡೆ ಟೂರ್ನಿ ಆರಂಭದಲ್ಲಿ ಸತತ ಎಂಟು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ರೋಹಿತ್ ಶರ್ಮಾ ಬಳಗವು ಬಳಿಕ ಜಯದ ಹಾದಿಗೆ ಮರಳಿತ್ತಲ್ಲದೆ ಸತತ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ಶನಿವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು ದಾಖಲಿಸುವುದರೊಂದಿಗೆ ಮುಂಬೈ ಪ್ಲೇ-ಆಫ್ ಕನಸು ಭಗ್ನಗೊಂಡಿದೆ. 10 ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಗಳಿಸಿರುವ ಮುಂಬೈ ಒಟ್ಟು 4 ಅಂಕ ಮಾತ್ರ ಗಳಿಸಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ ಲೀಗ್ ಹಂತದಲ್ಲಿ ಇನ್ನೂ ನಾಲ್ಕು ಪಂದ್ಯಗಳು ಉಳಿದಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.