2022: ಐಪಿಎಲ್‌ನಲ್ಲಿ ರವಿಚಂದ್ರನ್ ಅಶ್ವಿನ್ ಚೊಚ್ಚಲ ಅರ್ಧಶತಕ ಸಾಧನೆ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರವಿಚಂದ್ರನ್ ಅಶ್ವಿನ್ ಚೊಚ್ಚಲ ಅರ್ಧಶತಕ ಸಾಧನೆ ಮಾಡಿದ್ದಾರೆ. ಐಪಿಎಲ್ 2022 ಟೂರ್ನಿಯಲ್ಲಿ ರಾಜಸ್ಥಾನ್ ಪರ ಆಡುತ್ತಿರುವ ಅಶ್ವಿನ್, ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಇನ್ನಿಂಗ್ಸ್ ಕಟ್ಟಿದರು. 'ಕ್ರಿಕ್‌ಬಜ್' ಮಾಹಿತಿ ಪ್ರಕಾರ,179ನೇ ಪಂದ್ಯದ 72ನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಚೊಚ್ಚಲ ಅರ್ಧಶತಕ ಗಳಿಸಿದರು. ಒಟ್ಟಾರೆಯಾಗಿ ಐಪಿಎಲ್‌ನಲ್ಲಿ 12.53ರ ಸರಾಸರಿಯಲ್ಲಿ 589 ರನ್ ಗಳಿಸಿದ್ದಾರೆ. @ashwinravi99 37 👏👏 - ://./EA3RTz0tWQ # # ../ 38 ಎಸೆತಗಳನ್ನು ಎದುರಿಸಿದ ಅಶ್ವಿನ್ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು. ಅಶ್ವಿನ್ ಒಟ್ಟು 154 ವಿಕೆಟ್‌ಗಳನ್ನು ಗಳಿಸಿದ್ದಾರೆ. 34 ರನ್ನಿಗೆ ನಾಲ್ಕು ವಿಕೆಟ್ ಗಳಿಸಿರುವುದು ಸರ್ವಶ್ರೇಷ್ಠ ಸಾಧನೆಯಾಗಿದೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಅಶ್ವಿನ್ ಇದುವರೆಗಿನ 11 ಪಂದ್ಯಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅಲ್ಲದೆ 7.18 ಎಕಾನಮಿ ಕಾಪಾಡಿಕೊಂಡಿದ್ದು, ಪರಿಣಾಮಕಾರಿ ಎನಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.