2022: ಚೆನ್ನೈ ಪರ 200ನೇ ಪಂದ್ಯ; ಕೊಹ್ಲಿ ಸಾಲಿಗೆ ಧೋನಿ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ 200 ಪಂದ್ಯಗಳನ್ನಾಡಿದ ಗೌರವಕ್ಕೆ ಮಹೇಂದ್ರ ಸಿಂಗ್ ಧೋನಿ ಸಿಂಗ್ ಭಾಜನರಾಗಿದ್ದಾರೆ. ಐಪಿಎಲ್ 2022 ಟೂರ್ನಿಯಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಧೋನಿ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: 2022 : ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಈ ಮೂಲಕ ವಿರಾಟ್ ಕೊಹ್ಲಿ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಹಾಗೆಯೇ ಕೊಹ್ಲಿ ಬಳಿಕ ಫ್ರಾಂಚೈಸ್‌ವೊಂದರ ಪರ 200 ಅಥವಾ ಅದಕ್ಕಿಂತಲೂ ಹೆಚ್ಚು ಪಂದ್ಯವನ್ನು ಆಡಿದ ಎರಡನೇ ಆಟಗಾರ ಎನಿಸಿದ್ದಾರೆ. @ 200th .# # ../9Zmt77fm4w 2008ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಪದಾರ್ಪಣೆ ಮಾಡಿರುವ ವಿರಾಟ್ ಕೊಹ್ಲಿ, ಈವರೆಗೆ 218 ಪಂದ್ಯಗಳನ್ನು ಆಡಿದ್ದಾರೆ. ಅತ್ತ ಧೋನಿ ಐಪಿಎಲ್‌ನಲ್ಲಿ ಒಟ್ಟು 230 ಪಂದ್ಯಗಳನ್ನು ಆಡಿದ್ದಾರೆ. ಇದು ಕೂಡ ದಾಖಲೆಯಾಗಿದೆ. ಈ ಪಟ್ಟಿಯಲ್ಲಿ ವಿರಾಟ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 2016 ಹಾಗೂ 2017ರಲ್ಲಿ ಚೆನ್ನೈ ನಿಷೇಧಕ್ಕೆ ಒಳಗಾಗಿತ್ತು. ಈ ಅವಧಿಯಲ್ಲಿ ಧೋನಿ, ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಪರ 30 ಪಂದ್ಯಗಳನ್ನು ಆಡಿದ್ದರು. ಇನ್ನುಳಿದಂತೆ ಚೆನ್ನೈ ಪರ ಸುರೇಶ್ ರೈನಾ 176 ಹಾಗೂ ರವೀಂದ್ರ ಜಡೇಜ 142 ಪಂದ್ಯಗಳನ್ನು ಆಡಿದ್ದಾರೆ. #THA7A 2⃣0⃣0⃣ ! # # #💛🦁 ../rWgz0iCrqU ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.