ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಡೇವಿಡ್ ವಾರ್ನರ್ 400 ಸಿಕ್ಸರ್‌ಗಳ ಸಾಧನೆ ಮುಂಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 400 ಸಿಕ್ಸರ್‌ಗಳ ಸಾಧನೆ ಮಾಡಿದ್ದಾರೆ. ಐಪಿಎಲ್ 2022 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿರುವ ವಾರ್ನರ್, ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು. ಇದನ್ನೂ ಓದಿ: 2022: ವಾರ್ನರ್ ನಿಸ್ವಾರ್ಥ ಆಟ ಬಹಿರಂಗಪಡಿಸಿದ ಪೊವೆಲ್ ಅಜೇಯ 92 ರನ್ ಗಳಿಸಿದ್ದ ವಾರ್ನರ್ ಇನ್ನಿಂಗ್ಸ್‌ನಲ್ಲಿ ಮೂರು ಸಿಕ್ಸರ್‌ಗಳು ಸೇರಿದ್ದವು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಗಳಿಸಿದ ಬ್ಯಾಟರ್‌ಗಳ ಎಲೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಮುನ್ನಡೆಯಲ್ಲಿದ್ದು, ಚುಟುಕು ಕ್ರಿಕೆಟ್‌ನಲ್ಲಿ ಒಟ್ಟು 1,056 ಸಿಕ್ಸರ್‌ ಸಿಡಿಸಿದ್ದಾರೆ. ಈ ಮೂಲಕ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಸಾವಿರಕ್ಕೂ ಹೆಚ್ಚು ಸಿಕ್ಸರ್ ಗಳಿಸಿದ ವಿಶ್ವದ ಏಕಮಾತ್ರ ಬ್ಯಾಟರ್ ಎನಿಸಿದ್ದಾರೆ. ಡೇವಿಡ್ ವಾರ್ನರ್ ಟಿ20 ಮಾದರಿಯಲ್ಲಿ 400 ಸಿಕ್ಸರ್ ಗಳಿಸಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿದ್ದಾರೆ. " , " 👊👊# # #IPL2022 # # ../pYi5DwbMdU ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಾಧಕರು: ಕ್ರಿಸ್ ಗೇಲ್: 1,056 ಕೀರನ್ ಪೊಲಾರ್ಡ್: 772 ಆ್ಯಂಡ್ರೆ ರಸೆಲ್: 544 ಬ್ರೆಂಡನ್ ಮೆಕಲಮ್: 485 ಶೇನ್ ವ್ಯಾಟ್ಸನ್: 467 ಎಬಿ ಡಿವಿಲಿಯರ್ಸ್: 436 ರೋಹಿತ್ ಶರ್ಮಾ: 429 ಆ್ಯರನ್ ಫಿಂಚ್: 426 ಕಾಲಿನ್ ಮುನ್ರೊ: 420 ಡೇವಿಡ್ ವಾರ್ನರ್: 401 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.