-20: ಇಂಗ್ಲೆಂಡ್‌ ಸೋಲಿಸಿ ಫೈನಲ್‌ ಪ್ರವೇಶಿಸಿದ ಭಾರತ ಬರ್ಮಿಂಗ್‌ಹ್ಯಾಮ್‌:ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಕ್ರಿಕೆಟ್‌ನ ಸೆಮಿಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ ರೋಚಕ ಜಯ ದಾಖಲಿಸಿ ಫೈನಲ್‌ ಪ್ರವೇಶಿಸಿದೆ. ತೀವ್ರ ಹಣಾಹಣಿಯ ಈ ಪಂದ್ಯದಲ್ಲಿ ಭಾರತ ತಂಡ 4 ರನ್‌ಗಳ ರೋಚಕ ಗೆಲುವು ಸಾಧಿಸಿತು. ಮೊದಲ ಬ್ಯಾಟ್‌ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 164 ರನ್‌ ದಾಖಲಿಸಿತ್ತು. , 💥💙💪# # ../wSYHmlv3rb ಗೆಲುವಿನ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 160 ರನ್‌ ಮಾತ್ರ ದಾಖಲಿಸಲು ಸಾಧ್ಯವಾಯಿತು. ಭಾರತದ ಸ್ಮೃತಿ ಮಂದಾನ 61ರನ್‌ ಹೊಡೆದರು, ಇಂಗ್ಲೆಂಡ್‌ ಪರ ನ್ಯಾಟ 41 ರನ್‌ಗಳಿಸಿದರು. ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ಪದಕ ಖಚಿತವಾದಂತಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.