ಐಪಿಎಲ್ 2022ರಲ್ಲಿ ಜೋಸ್ ಬಟ್ಲರ್ 3ನೇ ಶತಕ ಸಾಧನೆ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಬ್ಯಾಟರ್ ಜೋಸ್ ಬಟ್ಲರ್, ಮೂರನೇಶತಕ ಸಾಧನೆ ಮಾಡಿದ್ದಾರೆ. ಇದರಲ್ಲಿ ಸತತ ಎರಡನೇ ಶತಕ ಸಾಧನೆಯೂ ಸೇರಿದೆ. ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಬಟ್ಲರ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿದರು. ಇದೇ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ (100) ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ (103) ವಿರುದ್ಧದ ಪಂದ್ಯದಲ್ಲಿ ಬಟ್ಲರ್ ಸಿಡಿಲಬ್ಬರದ ಶತಕ ಬಾರಿಸಿದ್ದರು. ಒಟ್ಟಾರೆಯಾಗಿ ಇಂಗ್ಲೆಂಡ್ ಮೂಲದ ಬಟ್ಲರ್, ಐಪಿಎಲ್‌ನಲ್ಲಿ ನಾಲ್ಕನೇ ಶತಕ ಗಳಿಸಿದ್ದಾರೆ. .. ...... 🤯🙀 # # ../5UwbLn6qvx 💯 # 2022 @ 👏👏 ../nPBIWxw8PA ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.