ಅರ್ಜುನ್ ಯಾರ್ಕರ್‌ಗೆ ವಿಕೆಟ್ ಛಿದ್ರ; ಸಚಿನ್ ಪುತ್ರ ಐಪಿಎಲ್ ಆಡಲು ರೆಡಿ? ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಅಭ್ಯಾಸದ ಅವಧಿಯ ವೇಳೆ ಅದ್ಭುತ ಯಾರ್ಕರ್ ಎಸೆದಿರುವ ಯುವ ಎಡಗೈ ವೇಗದ ಬೌಲರ್ ಅರ್ಜುನ್ ತೆಂಡೂಲ್ಕರ್ ಗಮನ ಸೆಳೆದಿದ್ದಾರೆ. ಈ ಮೂಲಕ ತಾವು ಐಪಿಎಲ್ ಆಡಲು ತಯಾರು ಎಂಬ ಸಂದೇಶವನ್ನು ರವಾನಿಸಿದ್ದಾರೆ. ಇದನ್ನೂ ಓದಿ: 2022: ಐಪಿಎಲ್‌ನಲ್ಲಿ ಸ್ಮರಣೀಯ ದಾಖಲೆ ಬರೆದ ಡೇವಿಡ್ ವಾರ್ನರ್ ಎಡಗೈ ಬ್ಯಾಟರ್ ಅನ್ನು ಯಾರ್ಕರ್ ಹಾಕಿ ಅರ್ಜುನ್ ತೆಂಡೂಲ್ಕರ್ ಕ್ಲೀನ್ ಬೌಲ್ಡ್ ಮಾಡಿದ್ದಾರೆ. ' 🎯 𝔸ℝ𝕁𝕌ℕ! 😎# # # ../P5eTfp47mG ಪ್ರಸ್ತುತ ವಿಡಿಯೊವನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಸತತ ಆರನೇ ಸೋಲಿನ ಮುಖಭಂಗಕ್ಕೊಳಗಾಗಿರುವ ಮುಂಬೈ, ಮೊದಲ ಗೆಲುವಿನ ಹುಡುಕಾಟದಲ್ಲಿದೆ. ಈ ಹಿನ್ನೆಲೆಯಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ರೋಹಿತ್ ಶರ್ಮಾ ಬಳಗವು ಇಂದು (ಗುರುವಾರ) ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.