ವೆಸ್ಟ್‌ ಇಂಡೀಸ್ ಆಟಗಾರ ಕೀರನ್‌ ಪೊಲಾರ್ಡ್‌ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಮುಂಬೈ: ವೆಸ್ಟ್‌ ಇಂಡೀಸ್ ಕ್ರಿಕೆಟಿಗ ಕೀರನ್‌ ಪೊಲಾರ್ಡ್‌ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಬುಧವಾರ ವಿದಾಯ ಹೇಳಿದ್ದಾರೆ. ಬಹಳಷ್ಟು ಯೋಚಿಸಿದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಆಡುತ್ತಿದ್ದಾರೆ. 34 ವರ್ಷ ವಯಸ್ಸಿನ ಪೊಲಾರ್ಡ್‌ 2007ರಲ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಕೊನೆಯ ಸರಣಿಯನ್ನು ಭಾರತ ತಂಡದ ವಿರುದ್ಧ ಆಡಿದ್ದಾರೆ. . ../3asF1CMdbC ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.